ಮಡಿಕೇರಿ ಆ. 31: ಜಿಲ್ಲಾ ಪಂಚಾಯಿತಿಯ ಪ್ರಮುಖ ಹುದ್ದೆಗಳನ್ನು ಭರ್ತಿಮಾಡಬೇಕು ಮತ್ತು ಗ್ರಾಮ ಪಂಚಾಯಿತಿ ನೌಕರರಿಗೆ ಬಡ್ತಿ ಹಾಗೂ ಕನಿಷ್ಟ ವೇತನವನ್ನು ನೀಡಬೇಕೆಂದು ಒತ್ತಾಯಿಸಿ ಸೆ. 14 ರಂದು ‘ನಮ್ಮ ಮಹಾನಡೆ ಬೆಂಗಳೂರಿನ ಕಡೆ’ ಹೋರಾಟವನ್ನು ಹಮ್ಮಿಕೊಂಡಿರು ವದಾಗಿ ಸಿಐಟಿಯು ಸಂಯೋಜಿತ ಗ್ರಾಮ ಪಂಚಾಯಿತಿ ನೌಕರರ ಸಂಘ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘÀದ ಅಧ್ಯಕ್ಷ ಪಿ.ಆರ್. ಭರತ್, ಜಿಲ್ಲಾ ಪಂಚಾಯಿತಿ ಯಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಉಪ ಕಾರ್ಯದರ್ಶಿ ಹಾಗೂ ಮುಖ್ಯ ಯೋಜನಾಧಿಕಾರಿಗಳ ಹುದ್ದೆ ಖಾಲಿ ಇವೆ. ಈ ಪ್ರಮುಖ ಹುದ್ದೆಗಳು ಭರ್ತಿಯಾಗದೆ ಇರುವಾಗ ಗ್ರಾಮ ಪಂಚಾಯಿತಿ ಮಟ್ಟದ ಸಮಸ್ಯೆಗಳಿಗೆ ಪರಿಹಾರ ಸೂಚಿಸುವವರು ಯಾರು ಎಂದು ಪ್ರಶ್ನಿಸಿದರು.

ಜಿಲ್ಲೆಯ 104 ಗ್ರಾಮ ಪಂಚಾಯಿತಿಗಳಲ್ಲೂ ಕಾರ್ಯದರ್ಶಿ, ಲೆಕ್ಕಾಧಿಕಾರಿ ಸೇರಿದಂತೆ ಪ್ರಮುಖ ಹುದ್ದೆಗಳು ಖಾಲಿ ಇದ್ದು, ಗ್ರಾಮದ ಜನ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಕಳೆÉದ ಹತ್ತಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಶೇ.70ರ ಮೀಸಲಾತಿಯಡಿ ಕಾರ್ಯದÀರ್ಶಿ ಮತ್ತು ಲೆಕ್ಕ ಸಹಾಯಕರಾಗಿ ಬಡ್ತಿ ಹೊಂದಬೇಕಾದ 23 ಬಿಲ್ ಕಲೆಕ್ಟರ್ ಗಳು ಬಡ್ತಿಯಿಂದ ವಂಚಿತರಾಗಿ ವಯೋ ನಿವೃತ್ತಿ ಹಂತಕ್ಕೆ ಬಂದು ತಲುಪಿದ್ದಾರೆ. ಈ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಹಿರಿಯ ಅಧಿಕಾರಗಳ ಹುದ್ದೆಯೆ ಖಾಲಿಯಿದ್ದು, ಜಿ.ಪಂ. ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲವೆಂದು ಭರತ್ ಆರೋಪಿಸಿದರು.

ಅಧಿಕಾರಿಗಳ ನೇಮಕ ಮತ್ತು ಸಂಘದ ವಿವಿಧ ಬೇಡಿಕೆಗಳಿಗೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದಲ್ಲಿ ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಅನಿರ್ದಿಷ್ಟಾವÀಧಿ ಧರಣಿ ಸತ್ಯಾಗ್ರಹ ನಡೆಸಲಾಗುವ ದೆಂದು ತಿಳಿಸಿದರು. ಇದಕ್ಕೂ ಮೊದಲು ಸೆ.14 ರಂದು ಎಲ್ಲಾ ಗ್ರಾಮ ಪಂಚಾಯಿತಿಗಳ ನೌಕರರು ಕರ್ತವ್ಯ ಸ್ಥಗಿತಗೊಳಿಸಿ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಭರತ್ ಹೇಳಿದರು. ಜಿಲ್ಲೆಯ ಶಾಸಕರಾದಿ ಯಾಗಿ ಎಲ್ಲಾ ಜನಪ್ರತಿನಿಧಿಗಳು ಈ ಅತಂತ್ರ ವ್ಯವಸ್ಥೆಗೆ ಹೊಣೆÉಗಾರರು ಎಂದು ಅವರು ಆರೋಪಿಸಿದರು.

ಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಪಿ. ಉಮೇಶ್, ಉಪಾಧ್ಯಕ್ಷ ವಿಠಲ, ಮಡಿಕೆÉೀರಿ ತಾಲೂಕು ಕಾರ್ಯದರ್ಶಿ ಲೀಲಾವತಿ ಹಾಗೂ ವೀರಾಜಪೇಟೆ ಉಪಾಧ್ಯಕ್ಷ ಎನ್.ಕೆ. ಹರೀಶ್ ಉಪಸ್ಥಿತರಿದ್ದರು.