ನಾಪೆÉÇೀಕ್ಲು, ಆ. 31: ನಾಪೆÉÇೀಕ್ಲು ಪಟ್ಟಣದ ಬೇತು ಗ್ರಾಮದ ಕಾರೆಕಡು ಎಂಬಲ್ಲಿ ಕಾವೇರಿ ನದಿ ತೀರದ ಮುಖ್ಯ ರಸ್ತೆಯ ಬಳಿ ಕಿಡಿಗೇಡಿಗಳು ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಪರಿಣಾಮ, ಈ ಪ್ರದೇಶವು ದುರ್ನಾತದಿಂದ ಕೂಡಿದೆ.

ಇಲ್ಲಿ ವಾಹನ ಸಂಚಾರ ಮತ್ತು ಜನ ಸಂಚಾರ ಕೂಡ ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ತಪ್ಪಿತಸ್ಥರ ವಿರುದ್ಧ ನಾಪೆÇೀಕ್ಲು ಗ್ರಾಮ ಪಂಚಾಯಿತಿ ಹಾಗೂ ಪೆÇಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಗ್ರಾ.ಪಂ. ತ್ಯಾಜ್ಯ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಂಡಿದ್ದು, ಶುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತಿದೆ.

ಆದರೆ ರಾತ್ರಿ ವೇಳೆಯಲ್ಲಿ ನಾಪೆÇೀಕ್ಲು ಪಟ್ಟಣದ ಬಳಿ ಕಿಡಿಗೇಡಿಗಳು ತ್ಯಾಜ್ಯ ವಿಲೇವಾರಿ ಮಾಡುತ್ತಿರುವದರಿಂದ ನಾಪೆÇೀಕ್ಲು ಗ್ರಾಮ ಪಂಚಾಯಿತಿ ಟೀಕೆಗೆ ಒಳಗಾಗುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಗ್ರಾ.ಪಂ. ಸದಸ್ಯ ಮಾಚೇಟಿರ ಕುಶ ಕುಶಾಲಪ್ಪ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರೆಕಡು ಬಳಿಯಲ್ಲಿ ತ್ಯಾಜ್ಯಗಳು ರಾಶಿ ರಾಶಿಯಾಗಿ ಬಿದ್ದಿರುವದು ಗಮನಕ್ಕೆ ಬಂದಿದ್ದು, ಗ್ರಾಮ ಪಂಚಾಯಿತಿಯ ಕಸಗಳನ್ನು ಟ್ರ್ಯಾಕ್ಟರ್ ಮುಖಾಂತರ ದಿನ ನಿತ್ಯ ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಇಲ್ಲಿ ತ್ಯಾಜ್ಯ ಹಾಕುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಅಧ್ಯಕ್ಷ ಕೆ.ಎ. ಇಸ್ಮಾಯಿಲ್ ಎಚ್ಚರಿಸಿದ್ದಾರೆ.