ಕೂಡಿಗೆ, ಆ. 31: ಇಂದಿನ ಮಕ್ಕಳು, ಯುವಕರು ಸೇರಿದಂತೆ ಪ್ರತಿಯೊಬ್ಬರು ಮೊಬೈಲ್‍ಗಳಿಗೆ ಅಂಟಿಕೊಂಡು ಮೊಬೈಲ್‍ಗಳಲ್ಲೆ ಆಟವಾಡುವದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಬದಲು ಯುವ ಜನತೆ ತಮ್ಮ ಬಿಡುವಿನ ಸಂದರ್ಭ ಮೈದಾನದಲ್ಲಿ ಕ್ರೀಡೆಯಲ್ಲಿ ತೊಡಗಿಸಿಕೊಂಡು ತಮ್ಮ ದೈಹಿಕ, ಮಾನಸಿಕ ಸಾಮಥ್ರ್ಯವನ್ನು ವೃದ್ದಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಸಲಹೆಯಿತ್ತರು. ಕೂಡಿಗೆಯ ಕ್ರೀಡಾ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಪಂಚಾಯಿತಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರದಲ್ಲಿ ಆಯೋಜಿಸಿದ್ದ 2017-18ನೇ ಸಾಲಿನ ಕೊಡಗು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಭಾರದ ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಮುಖ್ಯ ಅತಿಥಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ಕ್ರೀಡೆಯು ಮಾನವೀಯ ಮೌಲ್ಯಗಳ

(ಮೊದಲ ಪುಟದಿಂದ) ಜೊತೆ ಸೌಹಾರ್ದತೆ ಬೆಳೆಸುವ ಗುಣವನ್ನು ಹೊಂದಿದೆ ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಸರೋಜಮ್ಮ, ಕೆ.ಆರ್.ಮಂಜುಳಾ ಮಾತನಾಡಿದರು.

ಈ ಸಂದರ್ಭ ಕೂಡಿಗೆ ಕ್ರೀಡಾಶಾಲೆಯ ಮುಖ್ಯೋಪಾಧ್ಯಾಯಿನಿ ಕುಂತಿ ಬೋಪಯ್ಯ, ತಾಲೂಕು ಪಂಚಾಯಿತಿ ಸದಸ್ಯ ಗಣೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಆರ್.ಜಯಲಕ್ಷ್ಮಿ ಬಾಯಿ, ಕೂಡಿಗೆ ಕ್ರೀಡಾ ಶಾಲೆಯ ತರಬೇತಿದಾರರಾದ ಅಂತೋಣಿ ಡಿಸೋಜ, ಸಂಜಯ್ ಬಾಣದ್, ಬಿಂದ್ಯಾ, ಪ್ರೇಮ್‍ನಾಥ್, ದೈಹಿಕ ಶಿಕ್ಷಣ ಶಿಕ್ಷಕ ರಮೇಶ್ ಸೇರಿದಂತೆ ಶಿಕ್ಷಕ ವೃಂದದವರು ಇದ್ದರು.