ಮಡಿಕೇರಿ, ಸೆ.4 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತಾ. 6 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ವಿರೋಧ ಪಕ್ಷದ ಮುಖ್ಯ ಸಚೇತಕÀ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷÀ ಟಿ.ಪಿ.ರಮೇಶ್, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧಕ್ಷೆ ಕಾವೇರಮ್ಮ ಸೋಮಣ್ಣ, ಕೊಡಗು ಜಿಲ್ಲಾ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿ.ವೈ.ಆನಂದ ರಘು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷÀ ಬಿ.ಎಸ್.ಲೋಕೇಶ್ ಸಾಗರ್, ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಇತರರು ಪಾಲ್ಗೊಳ್ಳಲಿದ್ದಾರೆ.