ಮಡಿಕೇರಿ, ಸೆ. 6: ಗೌರಿ ಲಂಕೇಶ್ ಹತ್ಯೆ ಖಂಡಿಸಿ ಜಿಲ್ಲೆಯ ಪತ್ರಕರ್ತರು ಬುಧವಾರ ಗಾಂಧಿ ಪ್ರತಿಮೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಯಿತು. 50ಕ್ಕೂ ಹೆಚ್ಚು ಪತ್ರಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಗಾಂಧಿ ಪ್ರತಿಮೆ ಎದುರು ಒಂದು ನಿಮಿಷ ಮೌನಾಚರಿಸಲಾಯಿತು.ಹಂತಕರು ಹಾಗೂ ಸೂತ್ರಧಾರರನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಡಾ.ಆರ್.ವಿ. ಡಿಸೋಜ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡು ಸಂಘಟನೆಗಳಿಂದ ಲಿಖಿತ ಮನವಿ ಪತ್ರ ಸಲ್ಲಿಸಲಾಯಿತು. ಗೌರಿ ಲಂಕೇಶ್ ಹತ್ಯೆ ತನಗೂ ವೈಯಕ್ತಿಕವಾಗಿ ಬೇಸರವುಂಟು ಮಾಡಿದ್ದು, ತಮ್ಮ ಬೇಡಿಕೆಯ ಮನವಿ ಪತ್ರವನ್ನು ಸರ್ಕಾರಕ್ಕೆ ತಲುಪಿಸಲಾಗುವದು. ಹಂತಕರ ಬಂಧನ ತಕ್ಷಣ ಆಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ವಿ. ಡಿಸೋಜ ಹೇಳಿದರು.

ಗೌರಿ ಲಂಕೇಶ್ ಹತ್ಯೆ ಖಂಡನೀಯ. ತಕ್ಷಣ ಸರ್ಕಾರ ಹಂತಕರನ್ನು ಬಂಧಿಸಿ, ಕಾನೂನಿನ್ವಯ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಆ ಮೂಲಕ ಹಂತಕರು ಮತ್ತು ಹಂತಕರ ಹಿಂದಿರುವ ಶಕ್ತಿಗೆ ಸಂದೇಶ ರವಾನಿಸಬೇಕು. ಹತ್ಯೆ ಮೂಲಕ ವಿಚಾರಧಾರೆಗಳನ್ನು ಹತ್ತಿಕ್ಕಲು ಸಾಧ್ಯವೇ ಇಲ್ಲ. ಪತ್ರಕರ್ತರ ಧ್ವನಿ ಅಡಗಿಸುವ ಪ್ರಯತ್ನಕ್ಕೆ ಕೊನೆಗಾಣಿಸಬೇಕೆಂದು ಪತ್ರಕರ್ತರು ಆಗ್ರಹಿಸಿದರು.

ಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪತ್ರಕರ್ತರನ್ನುದ್ದೇಶಿಸಿ

(ಮೊದಲ ಪುಟದಿಂದ) ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಮಾಜಿ ಅಧ್ಯಕ್ಷರಾದ ಜಿ.ರಾಜೇಂದ್ರ, ಬಿ.ಜಿ. ಅನಂತಶಯನ, ಚಿ.ನಾ. ಸೋಮೇಶ್, ಹಾಲಿ ಖಜಾಂಚಿ ಸವಿತಾ ರೈ, ಭಾರತೀಯ ಪತ್ರಕರ್ತರ ಒಕ್ಕೂಟದ ಸದಸ್ಯ ಬಿ.ಎಸ್. ಲೋಕೇಶ್‍ಸಾಗರ್, ರಾಜ್ಯ ಸಂಘದ ನಿರ್ದೇಶಕ ಎಸ್.ಎ. ಮುರಳೀಧರ್, ಮಾಜಿ ನಿರ್ದೇಶಕ ಎಸ್. ಮಹೇಶ್, ಕೊಡಗು ಪ್ರೆಸ್‍ಕ್ಲಬ್ ಮಾಜಿ ಅಧ್ಯಕ್ಷ ಎಚ್.ಟಿ. ಅನಿಲ್, ಹಾಲಿ ಪ್ರಧಾನ ಕಾರ್ಯದರ್ಶಿ ಕೆ.ಬಿ. ಮಂಜುನಾಥ್, ಹಿರಿಯ ಪತ್ರಕರ್ತರಾದ ಜಿ. ಚಿದ್ವಿಲಾಸ್, ಐತಿಚಂಡ ರಮೇಶ್ ಉತ್ತಪ್ಪ, ಅಲ್ಲಾರಂಡ ವಿಠಲ್ ನಂಜಪ್ಪ, ಜಯಪ್ಪ ಹಾನಗಲ್, ಯುವ ಪತ್ರಕರ್ತ ಪ್ರಜ್ವಲ್ ಮಾತನಾಡಿದರು.

ಪ್ರತಿಭಟನೆಯಲ್ಲಿ ರಾಜ್ಯ ಪತ್ರಕರ್ತರ ಸಂಘ ನಿರ್ದೇಶಕ ಬಾಚರಣಿಯಂಡ ಅನು ಕಾರ್ಯಪ್ಪ, ಜಿಲ್ಲಾ ಪತ್ರಕರ್ತರ ಸಂಘ ಪ್ರಧಾನ ಕಾರ್ಯದರ್ಶಿ ಕುಡೆಕಲ್ ಸಂತೋಷ್, ಉಪಾಧ್ಯಕ್ಷ ಜಿ.ವಿ. ರವಿಕುಮಾರ್, ನಿರ್ದೇಶಕರಾದ ಆನಂದ ಕೊಡಗು, ಉಜ್ವಲ್ ರಂಜಿತ್, ಅರುಣ್ ಕೂರ್ಗ್, ಟಿ.ಕೆ. ಸಂತೋಷ್, ಸುವರ್ಣ ಮಂಜು, ಕೊಡಗು ಪ್ರೆಸ್‍ಕ್ಲಬ್ ಜಂಟಿ ಕಾರ್ಯದರ್ಶಿ ವಿಘ್ನೇಶ್ ಭೂತನಕಾಡು, ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಸಿ. ದಿನೇಶ್, ಮಾಜಿ ಉಪಾಧ್ಯಕ್ಷ ಕಾಯಪಂಡ ಶಶಿ ಸೋಮಯ್ಯ ಮತ್ತಿತರರು ಪಾಲ್ಗೊಂಡಿದ್ದರು.

ಸಂಕೇತ್ ಪೂವಯ್ಯ ಖಂಡನೆ

ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಯಾಗಿರುವ ಗೌರಿ ಲಂಕೇಶ್ ಹತ್ಯೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಸಂತಾಪ ವ್ಯಕ್ತಪಡಿಸಿದ್ದು ಇದು ಪ್ರಜಾಪ್ರಭುತ್ವದ ಮೇಲೆ ನಡೆದಿರುವ ದಾಳಿಯಾಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಯ ಕೃತ್ಯವಾಗಿದೆ. ಇಂದು ಸಮಾಜದಲ್ಲಿ ಶೋಷಿತವರ್ಗ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವ ಚಿಂತಕರು, ಬುದ್ದಿಜೀವಿಗಳು ಹಾಗೂ ಪತ್ರಕರ್ತರು ಭಯದ ವಾತಾವರಣದಲ್ಲಿ ಬದುಕುವಂಥ ಪರಿಸ್ಥಿತಿ ನಿರ್ಮಾಣವಾಗಿದ್ದು ಅಭದ್ರತೆ ತೀವ್ರವಾಗಿ ಕಾಡುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಹತ್ಯೆ ಖಂಡನೀಯವಾಗಿದ್ದು, ಇದನ್ನು ಪ್ರಜ್ಞಾವಂತ ಸಮಾಜ ಇದರ ವಿರುದ್ಧ ಧ್ವನಿ ಎತ್ತಬೇಕಾದ ಅನಿವಾರ್ಯತೆ ಇದೆ ಎಂದರು.

ಸೋಮವಾರಪೇಟೆ : ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಕ್ರಮವನ್ನು ಸೋಮವಾರಪೇಟೆ ಪತ್ರಿಕಾಭವನ ಟ್ರಸ್ಟ್, ನಗರ ಹಾಗೂ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಜಾಗೃತಿ ಮಹಿಳಾ ವೇದಿಕೆ, ಜಯಕರ್ನಾಟಕ ಸಂಘಟನೆ, ಕಲ್ಕಂದೂರಿನ ಜನಶಕ್ತಿ ವೇದಿಕೆ ಮತ್ತು ಜೆಡಿಎಸ್ ಪಕ್ಷಗಳು ತೀವ್ರವಾಗಿ ಖಂಡಿಸಿವೆ.

ನಗರದ ಪತ್ರಿಕಾಭವನದಲ್ಲಿ ಸಭೆ ನಡೆಸಿದ ಪತ್ರಕರ್ತರ ಸಂಘದ ಸದಸ್ಯರುಗಳು, ಗೌರಿ ಲಂಕೇಶ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದರು. ನಂತರ ತಾಲೂಕು ಕಚೇರಿಗೆ ತೆರಳಿ ಶಿರಸ್ತೇದಾರ್ ಧರ್ಮಪ್ಪ ಅವರ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿದರು.

ಇದರೊಂದಿಗೆ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಪತ್ರಕರ್ತರಿಗೆ ಭದ್ರತೆ ನೀಡಬೇಕು ಎಂಬ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭ ಪತ್ರಕರ್ತರ ಸಂಘದ ರಾಜ್ಯ ನಿರ್ದೇಶಕ ಮುರಳೀಧರ್, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಮಹೇಶ್, ತಾಲೂಕು ಸಂಘದ ಅಧ್ಯಕ್ಷ ಕವನ್ ಕಾರ್ಯಪ್ಪ, ಸದಸ್ಯರಾದ ಹಿರಿಕರ ರವಿ, ವಿಜಯ್, ಎಸ್.ಡಿ. ವಿಜೇತ್, ಇಂದ್ರೇಶ್ ಕೋವರ್‍ಕೊಲ್ಲಿ, ಜಯಪ್ಪ ಹಾನಗಲ್ ಉಪಸ್ಥಿತರಿದ್ದರು.

ಜಾಗೃತಿ ಮಹಿಳಾ ವೇದಿಕೆಯಿಂದಲೂ ಘಟನೆಯನ್ನು ಖಂಡಿಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಲಾಯಿತು. ವೇದಿಕೆಯ ಅಧ್ಯಕ್ಷೆ ಅಶ್ವಿನಿ ಕೃಷ್ಣಕಾಂತ್, ಕಾರ್ಯದರ್ಶಿ ಸುಶೀಲ ಹಾನಗಲ್, ಸದಸ್ಯರಾದ ಯಶೋಧ ಉಕ್ರಪ್ಪ, ವನಜಾಕ್ಷಿ ನಿರ್ವಾಣಪ್ಪ ಅವರುಗಳು ಉಪಸ್ಥಿತರಿದ್ದರು. ಮನವಿ ಸಲ್ಲಿಕೆ ಸಂದರ್ಭ ಜಯಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಸುರೇಶ್ ಶೆಟ್ಟಿ, ಸದಸ್ಯ ಗಾಂಧಿ, ಪ.ಪಂ. ನಾಮನಿರ್ದೇಶಿತ ಸದಸ್ಯ ಇಂದ್ರೇಶ್ ಅವರುಗಳು ಉಪಸ್ಥಿತರಿದ್ದರು.

ಗೌರಿ ಲಂಕೇಶ್ ಅವರ ಹತ್ಯೆ ಘಟನೆಯನ್ನು ಜಾತ್ಯತೀತ ಜನತಾದಳದ ರಾಜ್ಯ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ ವಿ.ಎಂ. ವಿಜಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪರಿಶಿಷ್ಟ ಜಾತಿ ಇಲಾಖೆಯ ರಾಜ್ಯ ಸಂಚಾಲಕ ಬಿ.ಈ. ಜಯೇಂದ್ರ, ಕಲ್ಕಂದೂರು ಜನಶಕ್ತಿ ವೇದಿಕೆಯ ಅಧ್ಯಕ್ಷ ಕೆ.ಪಿ. ರವೀಶ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್ ಅವರುಗಳು ಖಂಡಿಸಿ ಸಂತಾಪ ಸೂಚಿಸಿದ್ದಾರೆ.

ಕುಶಾಲನಗರ : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಖಂಡನೆ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡುವ ಬಗ್ಗೆ ನಿರ್ಣಯ.

ಕುಶಾಲನಗರ : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಟ್ರಸ್ಟ್ ಸದಸ್ಯರು ಪ್ರತಿಭಟನೆ ನಡೆಸಿದರು. ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ.ಎನ್.ಚಂದ್ರಮೋಹನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಘಟನೆಯನ್ನು ಖಂಡಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಯಿತು.

ಪತ್ರಕರ್ತರಿಗೆ ಸೂಕ್ತ ಭದ್ರತೆ ಒದಗಿಸಲು ಸರಕಾರ ಕ್ರಮಕೈಗೊಳ್ಳಬೇಕು. ಘಟನೆಗಳು ಮರುಕಳಿಸದಂತೆ ರಾಜ್ಯದಾದ್ಯಂತ ಎಚ್ಚರವಹಿಸಬೇಕು ಎಂದು ಒತ್ತಾಯಿಸಲಾಯಿತು. ಸಭೆಯಲ್ಲಿ 1 ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಲಾಯಿತು. ಘಟನೆ ಖಂಡಿಸಿ ಜಿಲ್ಲಾ ಪತ್ರಕರ್ತರ ಸಂಘದ ಸೂಚನೆಯಂತೆ ಕಪ್ಪು ಪಟ್ಟಿ ಧರಿಸಿ ಪತ್ರಕರ್ತರು ಮತ್ತು ಮಾಧ್ಯಮದವರು ಕಾರ್ಯನಿರ್ವಹಿಸಿದರು.

ಸಿದ್ದಾಪುರ : ಸಿದ್ದಾಪುರ ನಗರ ಪತ್ರಕರ್ತರ ಸಂಘದಿಂದ ಗೌರಿ ಲಂಕೇಶ್ ಹತ್ಯೆ ಖಂಡನೆ ಮೌನ ಪ್ರತಿಭಟನೆ.

ಗೋಣಿಕೊಪ್ಪ : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಗೋಣಿಕೊಪ್ಪದಲ್ಲಿ ಪತ್ರಕರ್ತರು ಕಪ್ಪು ಪಟ್ಟಿ ಧರಿಸಿ ಕಾರ್ಯ ನಿರ್ವಹಿಸಿದರು.

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ವಿಷಯದಲ್ಲಿ ಗೋಣಿಕೊಪ್ಪ ಪ್ರೆಸ್ ಕ್ಲಬ್ ವತಿಯಿಂದ ಸಂತಾಪ ನಡೆಸಲಾಯಿತು. ಹೇಯಕೃತ್ಯವನ್ನು ಖಂಡಿಸಿ ಹತ್ಯೆಗೈದವರನ್ನು ಶೀಘ್ರವಾಗಿ ಬಂಧಿಸುವ ಮೂಲಕ ಸಾವಿಗೆ ನ್ಯಾಯ ಒದಗಿಸಲು ಒತ್ತಾಯಿಸಲಾಯಿತು. ಜಿಲ್ಲಾ ಸಂಘದ ನಿರ್ದೇಶನದಂತೆ ಕಪ್ಪುಪಟ್ಟಿ ಧರಿಸಿ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸ ಲಾಯಿತು.

ದ.ಸಂ.ಸ. ಪ್ರತಿಭಟನೆ

*ಗೋಣಿಕೊಪ್ಪಲು : ಪತ್ರಕರ್ತೆ, ಲೇಖಕಿ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಜಿಲ್ಲಾ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು.

ಗೋಣಿಕೊಪ್ಪಲು ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಿ, ಕೃತ್ಯವೆಸಗಿದ ಆರೋಪಿಗಳನ್ನು ಕೂಡಲೆ ಬಂದಿಸಬೇಕೆಂದು ಒತ್ತಾಯಿಸಿ ಕೃತ್ಯದ ವಿರುದ್ಧ ಘೋಷಣೆ ಕೂಗಿದರು.

ಮಹಿಳೆಯರ ಹತ್ಯೆ ನಡೆಯುತ್ತಿರುವದು ಖಂಡನೀಯ. ಸರಕಾರ ಮಹಿಳೆಯರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕಾಗಿದೆ. ಗೌರಿ ಲಂಕೇಶ್ ಹತ್ಯೆಯ ಆರೋಪಿಗಳನ್ನು ಕೂಡಲೆ ಬಂದಿಸಿ ನ್ಯಾಯ ಒದಗಿಸಿ ಕೊಡಬೇಕಾಗಿದೆ ಎಂದು ಜಿಲ್ಲಾ ದಲಿತ ಸಂಘರ್ಷ ಸಮಿತಿ ಸಂಚಾಲಕ ಹೆಚ್.ಆರ್. ಪರಶುರಾಮ್ ಹೇಳಿದರು.

ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಸತೀಶ್ ಸಿಂಗಿ ಮಾತನಾಡಿ, ಅಮಾನವೀಯ ಕೃತ್ಯ ರಾಜಕೀಯದ ಷಡ್ಯಂತ್ರÀವಾಗಿದೆ. ಈ ಹಿಂದೆ ಮಹಾರಾಷ್ಟ್ರದಲ್ಲಿ ವಿಚಾರವಾದಿಗಳ ಕಗ್ಗೊಲೆಯಾಗಿತ್ತು. ನಂತರ ಚಿಂತಕ ಕಲ್ಬುರ್ಗಿಯವರ ಹತ್ಯೆ ನಡೆದಿದೆ. ಇದರ ಬೆನ್ನಲ್ಲೇ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಇದೆಲ್ಲದರ ಹಿಂದೆ ಕಾಣದ ಕೈಗಳ ಕೈವಾಡವಿದೆ. ಸರಕಾರ ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಆರೋಪಿಗಳನ್ನು ಬಂದಿಸುವ ಮೂಲಕ ನ್ಯಾಯ ಒದಗಿಸಿಕೊಡಬೇಕು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಖಜಾಂಚಿ, ಹೆಚ್.ಎನ್. ಕುಮಾರ್ ಮಹಾದೇವ್, ಪ್ರಮುಖರಾದ ಮುರುಗ, ತಂಗರಾಜು, ತಂಬಿ ಕರ್ಣರಾಜು, ಕುಮಾರ್, ಪಿ.ಜಿ. ಸುಬ್ರಮಣಿ, ಗಿರೀಶ್ ಸೇರಿದಂತೆ ಸದಸ್ಯರುಗಳು, ಪದಾಧಿಕಾರಿಗಳು ಹಾಜರಿದ್ದರು.

ಎಸ್‍ಡಿಪಿಐ ಪ್ರತಿಭಟನೆ

ಸಿದ್ದಾಪುರ: ಪ್ರಗತಿಪರ ಚಿಂತಕಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಎಸ್‍ಡಿಪಿಐ ಪಕ್ಷದ ಕಾರ್ಯಕರ್ತರು ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದÀರ್ಭ ಪಕ್ಷದ ಮುಖಂಡ ಮುಸ್ತಫ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಮಾತನಾಡಿದರು

ಪ್ರತಿಭಟನೆಯಲ್ಲಿ ಪಕ್ಷದ ಸಿದ್ದಾಪುರ ಘಟಕ ಅಧ್ಯಕ್ಷ ಶಾಹುಲ್, ಗ್ರಾ.ಪಂ. ಸದಸ್ಯರಾದ ಹುಸೈನ್, ಸಂಶೀರ್, ಪ್ರಮುಖರಾದ ಹನೀಫ್, ಬಶೀರ್ ಸೇರಿದಂತೆ ಮತ್ತಿತರರು ಇದ್ದರು.

*ಸಿದ್ದಾಪುರ ನಗರ ಪತ್ರಕರ್ತ ಸಂಘದಿಂದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.

*ಜಾತ್ಯತೀತ ಒಕ್ಕೂಟದ ವತಿಯಿಂದ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಈ ಸಂದÀರ್ಭ ವಿವಿಧ ರಾಜಕೀಯ ಪಕ್ಷ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಹತ್ಯೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತಾ ಆರೋಪಿಗಳನ್ನು ಕೂಡಲೇ ಬಂದಿಸಬೇಕೆಂದು ಒತ್ತಾಯಿಸಿದರು.

ಎಸ್‍ಡಿಪಿಐ ಪ್ರತಿಭಟನೆ

ಮಡಿಕೇರಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಸೋಸಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಮಡಿಕೇರಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಘಟನೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಹ್ಯಾರೀಸ್, ಎಸ್‍ಡಿಪಿಐ ನಗರಾಧ್ಯಕ್ಷ ಕೆ.ಜೆ. ಪೀಟರ್, ನಗರಸಭಾ ಸದಸ್ಯ ಮನ್ಸೂರ್, ಪ್ರಮುಖರಾದ ಅಬ್ದುಲ್ ಅಡ್ಕಾರ್, ಲತೀಫ್ ಮತ್ತಿತರರು ಪಾಲ್ಗೊಂಡಿದ್ದರು.

ಗೋಣಿಕೊಪ್ಪಲು: ಗೌರಿ ಲಂಕೇಶ್ ಹತ್ಯೆಯನ್ನು ಗೋಣಿಕೊಪ್ಪಲು ಪ್ರೆಸ್‍ಕ್ಲಬ್ ವತಿಯಿಂದ ಖಂಡಿಸಿ, ಹಂತಕರ ಶೀಘ್ರ ಬಂಧನಕ್ಕೆ ಒತ್ತಾಯಿಸಲಾಯಿತು.

ಪ್ರೆಸ್‍ಕ್ಲಬ್ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಅಧ್ಯಕ್ಷತೆಯಲ್ಲಿ ಜರುಗಿದ ಸಂತಾಪ ಸಭೆಯಲ್ಲಿ ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕುಪ್ಪಂಡ ದತ್ತಾತ್ರಿ, ಪ್ರೆಸ್‍ಕ್ಲಬ್ ಸ್ಥಾಪಕ ಅಧ್ಯಕ್ಷ ಟಿ.ಎಲ್. ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಜಗದೀಶ್, ಅಶೋಕ್ ಹಾಗೂ ರಾಖೇಶ್ ಕೊಡಗು ಭಾಗವಹಿಸಿದ್ದರು.

ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಇಂದು ಎಲ್ಲ ಪತ್ರಕರ್ತರು ಕಪ್ಪುಪಟ್ಟಿ ಧರಿಸಿ ಕಾರ್ಯನಿರ್ವಹಿಸಿದರು.