ಸೋಮವಾರಪೇಟೆ,ಸೆ.5: ಮುಖ್ಯಮಂತ್ರಿಗಳ ವಿಶೇಷ ಪ್ಯಾಕೇಜ್ ಅನುದಾನದಲ್ಲಿ ತಾಲೂಕಿನ ಕಿರಗಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. 45 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿರುವ ವಿವಿಧ ರಸ್ತೆ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ಚಾಲನೆ ನೀಡಿದರು.

ಕಿರಗಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಾರ ಮನೆಯಿಂದ ಕಜ್ಜೆಗೆ ಮನೆ ರಸ್ತೆ, ಹಳ್ಳಿ ಬೆಟ್ಟ ಸಂಪರ್ಕ ರಸ್ತೆ, ಅಜ್ಜೇಗೌಡ್ನ ಮನೆ ರಸ್ತೆ, ಬಿಳಿಗೇರಿ-ಅಟ್ಟಳ್ಳಿ ರಸ್ತೆ, ಹಳೆ ಟೆಲಿಫೋನ್ ರಸ್ತೆ, ಬಾಚಿನಾಡಂಡ ಮನೆ ರಸ್ತೆಗಳಿಗೆ ವೀಣಾ ಅಚ್ಚಯ್ಯ ಅವರು ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯ ಬಿ.ಬಿ. ಸತೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್, ಗ್ರಾ.ಪಂ. ಉಪಾಧ್ಯಕ್ಷ ಸುರೇಂದ್ರ, ಸದಸ್ಯರುಗಳಾದ ಭರತ್, ಪೊನ್ನಪ್ಪ, ಗಿರೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಚಂಗಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.