ಮಡಿಕೇರಿ, ಸೆ. 5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವು ನಗರದ ಸಂತ ಜೋಸೆಫರ ಶಾಲೆಯ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಗಣೇಶ್ ಕಾರ್ಣಿಕ್ ಅವರು ಸರ್ವಪಲ್ಲಿ ರಾಧಾಕೃಷ್ಣನ್ ಜಗತ್ತು ಕಂಡ ಶ್ರೇಷ್ಠ ಚಿಂತಕ. ಭಾರತೀಯ ತತ್ವಶಾಸ್ತ್ರದಲ್ಲಿ ಅಪಾರ ಜ್ಞಾನ ಹೊಂದಿದ್ದರು. ತತ್ವಜ್ಞಾನವನ್ನು ಜಗತ್ತಿಗೆ ಪರಿಚಯಿಸಿದರು ಎಂದು ಹೇಳಿದರು.

ಮಾಜಿ ರಾಷ್ಟ್ರಪತಿ ರಾಧಕೃಷ್ಣನ್ ಅವರ ಹುಟ್ಟು ಹಬ್ಬದ ದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿಸಿ ಆಚರಿಸಲಾಗುತ್ತಿದೆ. ಇಡೀ ಸಮಾಜ ಶಿಕ್ಷಕರನ್ನು ಗುರುತಿಸಿ ಗೌರವಿಸು ವಂತಾಗಿದೆ. ಎಲ್ಲರ ಬದುಕಿನಲ್ಲಿ ಬೆಳಕನ್ನು ಮೂಡಿಸುವ ಕೆಲಸವನ್ನು ಶಿಕ್ಷಕರು ಮಾಡುತ್ತಿದ್ದಾರೆ. ಅವರ ಜೀವನ ಎಲ್ಲರಿಗೂ ಪ್ರೇರಣೆ ಯಾಗಿದೆ. ಸಮಾಜದ ಅಭಿವೃದ್ದಿಗೆ ಶಿಕ್ಷಕರ ಕೊಡುಗೆ ಅಪಾರ. ವಿದ್ಯಾರ್ಥಿಗಳಿಗೆ ಒಳ್ಳೆಯ ಸಲಹೆ, ಮಾರ್ಗದರ್ಶನ ನೀಡಿದರೆ ಸಮಾಜವನ್ನು ಮತ್ತಷ್ಟು ಪರಿವರ್ತನೆಯತ್ತ ಕೊಂಡೊಯ್ಯಬಹುದು ಎಂದು ಗಣೇಶ್ ಕಾರ್ಣಿಕ್ ಅವರು ಹೇಳಿದರು.

ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಶಿಕ್ಷಕರು ಉತ್ತಮ ಪ್ರಜೆಗಳನ್ನು ರೂಪಿಸುವ ರೂವಾರಿ ಗಳಾಗಿದ್ದು, ಸಮಾಜದ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಬೇಕು. ಶಿಕ್ಷಕರು ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವದರ ಜತೆಗೆ ವ್ಯಕ್ತಿತ್ವ ನಿರ್ಮಾಣ ಮಾಡಲು ಪಣತೊಡುವಂತಾಗಬೇಕು ಎಂದರು.

ಉತ್ತಮ ಸಮಾಜ ಕಟ್ಟಲು ಶಿಕ್ಷಕರ ಪಾತ್ರ ಹೆಚ್ಚಿನದ್ದಾಗಿದೆ. ಶಿಕ್ಷಕ ವೃತ್ತಿಯು ಪವಿತ್ರ ಮತ್ತು ಗೌರಯುತ ಹುದ್ದೆಯಾಗಿದ್ದು, ಅದನ್ನು ಅರಿತು ಶಿಕ್ಷಕರು ಒಳ್ಳೆಯ ಸಮಾಜ ನಿರ್ಮಾಣ ಮಾಡಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ, ಸಲಹೆಗಳನ್ನು ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪು ಗೊಳ್ಳುವಂತೆ ಮಾಡುವಲ್ಲಿ ಶಿಕ್ಷಕರ ಪಾತ್ರ ಹೆಚ್ಚಿದೆ. ಇದರಿಂದಾಗಿಯೇ ವೃತ್ತಿಯಲ್ಲಿ ಯಾರೇ ಎಷ್ಟೇ ದೊಡ್ಡವರಾದರೂ ಸಹ, ಶಿಕ್ಷಕರನ್ನು ಸದಾ ಸ್ಮರಿಸುತ್ತಾರೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿಸೆಂಟ್ ಡಿಸೋಜ ಅವರು ಮೌಲ್ಯಯುತ ಶಿಕ್ಷಣ ಅನುಷ್ಠಾನಕ್ಕೆ ಸಮಾಜ ಹಾಗೂ ಶಿಕ್ಷಣ ಸಂಸ್ಥೆಗಳು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಬೇಕು. ಸರ್ಕಾರದ ಜೊತೆಗೆ ಸಮಾಜ ಹಾಗೂ ಶಿಕ್ಷಣ ಸಂಸ್ಥೆಗಳು ಕೈಜೋಡಿಸಿದಾಗ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬಹುದು. ಯಾವದೇ ಕ್ಷೇತ್ರದಲ್ಲಿ ಕಲಿಕೆ ನಿರಂತರವಾಗಿರಬೇಕು. ಹೆಚ್ಚು ಅಧ್ಯಯನ ಮಾಡಿ ಪಾಠ-ಪ್ರವಚನ ಮಾಡಿದರೆ ವಿದ್ಯಾರ್ಥಿಗಳಲ್ಲಿ ಇನ್ನಷ್ಟು ಬೌದ್ಧಿಕ ಮಟ್ಟ ಹೆಚ್ಚಿಸಬಹುದು ಎಂದು ಅಭಿಪ್ರಾಯಪಟ್ಟರು.

ಕೂಡಿಗೆ ಡಯಟ್‍ನ ಉಪ ನಿರ್ದೇಶಕ (ಅಭಿವೃದ್ಧಿ) ವಾಲ್ಟರ್ ಹಿಲೇರಿ ಡಿಮೇಲೋ ಅವರು ಮಾತನಾಡಿ, ಸಮಾಜದ ಪ್ರತಿಯೊಬ್ಬರ ವ್ಯಕ್ತಿತ್ವ ನಿರ್ಮಾಣದ ನಿಜವಾದ ಶಿಲ್ಪಿಗಳು ಶಿಕ್ಷಕರಾಗಿದ್ದಾರೆ. ಶಿಕ್ಷಕರೇ ದೇಶದ ಭವಿಷ್ಯದ ನಿಜವಾದ ರೂವಾರಿಗಳಾಗಿದ್ದು, ಆ ನಿಟ್ಟಿನಲ್ಲಿ ಮಕ್ಕಳನ್ನು ಸರಿದಾರಿಗೆ ತರುವ ಕೆಲಸ ಮಾಡಬೇಕು ಎಂದು ತಿಳಿಸಿದರು.

(ಮೊದಲ ಪುಟದಿಂದ) ಶಿಕ್ಷಣ ಎನ್ನುವದು ಸೇವೆಯ, ಸಮರ್ಪಣಾ ಮನೋಭಾವದ ವೃತ್ತಿಯಾಗಿದೆ. ಆ ದಿಸೆಯಲ್ಲಿ ಶಿಕ್ಷಕರು ಕಾರ್ಯ ನಿರ್ವಹಿಸಬೇಕು. ಶಿಕ್ಷಕರ ಅಭಿವೃದ್ಧಿಗೆ ಪ್ರಗತಿಪರ ಚಿಂತನೆ ಮಾಡಿ ಮಾನವ ಸಂಪನ್ಮೂಲ ಅಭಿವೃದ್ದಿ ಆಗಬೇಕು ಎಂದರು.

ವಿಘ್ನೇಶ್ವರ ಪ್ರೌಢಶಾಲೆಯ ಕಲಾ ಶಿಕ್ಷಕÀ ಜಯಕುಮಾರ್ ಕೆ.ಪಿ., ಶಿಕ್ಷಕರು ಬೋಧನೆ ಮಾಡುವಾಗ ಉತ್ಸಾಹ, ಜ್ಞಾನ, ಪಾಂಡಿತ್ಯ ಹೊಂದಿರಬೇಕು ಎಂದರು.

ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮಡಿಕೇರಿ ತಾಲೂಕು ಕರಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ್ ಎಸ್., ಸೋಮವಾರ ಪೇಟೆ ತಾಲೂಕಿನ ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸತೀಶ್ ಸಿ.ಎಸ್., ವೀರಾಜಪೇಟೆ ತಾಲೂಕಿನ ಬೆಕ್ಕೆಸೊಡ್ಲೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕೃಷ್ಣ ಕೆ.ಇ. ಪ್ರೌಢ ಶಾಲಾ ವಿಭಾಗದಿಂದ ಮಡಿಕೇರಿ ತಾಲೂಕು ಚೆಯ್ಯಂಡಾಣೆ, ನರಿಯಂದಡ ಪ್ರೌಢಶಾಲೆಯ ಮುಖ್ಯ ಶಿಕ್ಷP ಆರ್. ಮನೋಹರ್ ನಾಯ್ಕ್, ಸೋಮವಾರಪೇಟೆ ತಾ. ಎಸ್.ಜೆ.ಎಂ. ಬಾಲಿಕಾ ಪ್ರೌಢಶಾಲೆಯ ವೃತ್ತಿ ಶಿಕ್ಷಕರಾದ ವಿರುಪಾಕ್ಷಯ್ಯ ಎಸ್.ಎಸ್. ಹಾಗೂ ವೀರಾಜಪೇಟೆ ತಾಲೂಕು ಟಿ.ಶೆಟ್ಟಿಗೇರಿ ಎಂ.ಎಂ.ಸ್ಮಾರಕ ಸರ್ಕಾರಿ ಪ್ರೌಢ ಶಾಲೆಯ ರುಕ್ಮಿಣಿ ಸಿ.ಕೆ. ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಿ.ಎಂ. ದಾನೋಜಿ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯತ್ರಿ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷÀ ಜೋಯಪ್ಪ ಬಿ.ಆರ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ, ಅನುದಾನಿತ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷÀ ಡಿ.ಎ.ಮೋಹನ್, ಕ.ರಾ.ಪ್ರಾ.ಶಾ.ಶಿ.ಸಂಘದ ಅಧ್ಯಕ್ಷÀ ಎಚ್.ಎಸ್.ಚೇತನ್, ಕೊ.ಜಿ.ಪ್ರಾ.ಶಾ. ಮು.ಶಿ.ಸಂಘದ ಅಧ್ಯಕ್ಷ ಎನ್.ಕೆ. ಪ್ರಭು, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷÀ ಪಿ.ಎ.ಪ್ರವೀಣ್, ಮಡಿಕೇರಿ ತಾಲೂಕು ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಹ ಬೂಬ್‍ಸಾಬ್ ಎನ್.ಕೆ., ಮಡಿಕೇರಿ ಕ.ರಾ.ಪ್ರಾ.ಸ.ಶಿ.ಸಂಘದ ಅಧ್ಯಕ್ಷÀ ಜನಾರ್ಧನ ಹಾಗೂ ಮಡಿಕೇರಿ ಅನುದಾನಿತ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷÀ ವಿಲ್‍ಫ್ರೇಡ್ ಕ್ರಾಸ್ತಾ ಇತರರು ಇದ್ದರು.