ಮಡಿಕೇರಿ, ಸೆ. 6: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅ. 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಜಿಲ್ಲಾ ಮಟ್ಟದಲ್ಲಿ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಆಚರಿಸುವ ಸಂಬಂಧ ಕೊಡಗು ಜಿಲ್ಲೆಯ ಹಿರಿಯ ನಾಗರಿಕರಿಗೆ ಆಟೋಟ ಸ್ಪರ್ಧೆ ಮತು ಸಾಂಸ್ಕøತಿಕ ಸ್ಪರ್ಧೆಗಳು ತಾ. 12 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ: 08272-222830 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.