ಮಡಿಕೇರಿ, ಸೆ. 7: ಜಿಲ್ಲೆಯಲ್ಲಿ ಡೆಂಘೀ ಮತ್ತು ಚಿಕೂನ್ ಗೂನ್ಯ ರೋಗ ನಿಯಂತ್ರಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳ ಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ನೀಡಿ ಏಡೀಸ್ ಲಾರ್ವಾ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ. ಏಡೀಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ಗುರುತಿಸಿ ಸಾರ್ವಜನಿಕರಲ್ಲಿ ಲಾರ್ವಾ ಉತ್ಪತ್ತಿ ತಾಣಗಳ ನಿರ್ಮೂಲನೆಯ ಮಹತ್ವದ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ.

ಗ್ರಾಮಾಂತರ ಮತ್ತು ನಗರ/ಪಟ್ಟಣ ಪ್ರದೇಶಗಳಲ್ಲಿ ಪ್ರಮುಖ ಸ್ಥಳಗಳ ಪರಿಸರದಲ್ಲಿ ಸಂಗ್ರಹವಾಗು ವಂತಹ ಘನತ್ಯಾಜ್ಯ ವಸ್ತುಗಳಾದ ಪ್ಲಾಸ್ಟಿಕ್ ವಸ್ತುಗಳು, ಎಳನೀರಿನ ಚಿಪ್ಪುಗಳು, ಗಾಜಿನ ವಸ್ತುಗಳು, ಹಳೆಯ ಟೈರುಗಳು ಇತ್ಯಾದಿಗಳನ್ನು ವಾರಕ್ಕೊಮ್ಮೆ ವಿಲೇವಾರಿ ಮಾಡಿ, ಸೊಳ್ಳೆಗಳು ಉತ್ಪತ್ತಿಯಾಗದಂತೆ ಅಗತ್ಯ ಕ್ರಮವಹಿಸಲು ಮತ್ತು ಎಲ್ಲಾ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸಮನ್ವಯದೊಂದಿಗೆ ಅಗತ್ಯ ಕ್ರಮವಹಿಸಲು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೂಚಿಸಿ ಕ್ರಮವಹಿಸಲಾಗುತ್ತಿದೆ. ಡೆಂಘೀ ಜ್ವರ ಪ್ರಕರಣಗಳು ಕಂಡು ಬರುವ ಪ್ರದೇಶಗಳಲ್ಲಿ ಅಗತ್ಯ ಮುಂಜಾಗ್ರತಾ ಮತ್ತು ನಿಯಂತ್ರಣ ಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಎಲ್ಲಾ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರಗಳಿಗೆ, ಜಿಲ್ಲಾ ಆಸ್ಪತ್ರೆ ಮತ್ತು ಸಾರ್ವಜನಿಕ ಆಸ್ಪತ್ರೆಗಳಿಗೆ ಅಗತ್ಯ ಚಿಕಿತ್ಸೆ ನೀಡುವದು ಹಾಗೂ ಮುನ್ನೆಚ್ಚರಿಕೆ ವಹಿಸಲು ತಿಳಿಸಲಾಗಿದೆ. ಕೊಡಗು ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಡೆಂಘೀ ಜ್ವರದ ಅಗತ್ಯ ಬೆಂಬಲಾತ್ಮಕ ಚಿಕಿತ್ಸೆಯ ಔಷಧಗಳನ್ನು ದಾಸ್ತಾನಿರಿಸಿ ಕೊಳ್ಳಲಾಗಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳ ಹೆಚ್ಚಿನ ಉನ್ನತ ಚಿಕಿತ್ಸೆಗೆ ಅನುಕೂಲವಾಗುವಂತೆ ರೆಪರಲ್ ಆಸ್ಪತ್ರೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡುವಂತೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯೆದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜಿಲ್ಲೆಯಲ್ಲಿ ಮಾಸಿಕ ತಾಲೂಕು ಮಟ್ಟದ ಪ್ರಗತಿ ಪರಿಶಿಲನಾ ಸಭೆಗಳನ್ನು ನಡೆಸುವದರ ಜೊತೆಗೆ ಜಿಲ್ಲೆಯ ಎಲ್ಲಾ ತಾಲೂಕು ಹಿರಿಯ ಆರೋಗ್ಯ ಸಹಾಯಕರುಗಳು, ಹಿರಿಯ ಪುರುಷ ಆರೋಗ್ಯ ಸಹಾಯಕರುಗಳು, ಕಿರಿಯ ಪುರುಷ ಆರೋಗ್ಯ ಸಹಾಯಕರುಗಳ ವಿಶೇಷ ಸಭೆ, ಮುಂಗಾರು ಪ್ರಾರಂಭದ ಅವಧಿ ಯಿಂದಲೇ ಸಭೆ ಕರೆದು ಜಿಲ್ಲೆಯಲ್ಲಿ ಡೆಂಘೀ ಜ್ವರ ಮತ್ತು ಇನ್ನಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಿ, ರೋಗ ಪ್ರಕರಣಗಳು ಉಲ್ಭಣಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮವನ್ನು ಸ್ಥಳೀಯ ಸಂಸ್ಥೆಗಳ ಸಮನ್ವಯ ದೊಂದಿಗೆ ನಿರ್ವಹಿಸ ಲಾಗುತ್ತಿದೆ. ಡೆಂಘೀ ಜ್ವರ ಮತ್ತು ಚಿಕೂನ್ ಗೂನ್ಯ ರೋಗ ಪ್ರಕರಣಗಳನ್ನು ಜಿಲ್ಲೆಯ ಕೇಂದ್ರ ಸ್ಥಾನದಲ್ಲಿಯೇ ಇಐISಂ ಪರೀಕ್ಷೆ ಮಾಡುವ ವ್ಯವಸ್ಥೆಯನ್ನು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಸೂಚನೆಯಂತೆ ಪ್ರಯೋಗಾಲಯ ಪರೀಕ್ಷೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.