ಮಡಿಕೇರಿ, ಸೆ. 7 : ಕೊಡಗು ಪ್ರೆಸ್‍ಕ್ಲಬ್ ಹಾಗೂ ವೀರಾಜಪೇಟೆ ಕಾವೇರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ಸರಣಿ ಮಾಧ್ಯಮ ಸಂವಾದ ಕಾರ್ಯಕ್ರಮಕ್ಕೆ ತಾ.8 ರಂದು (ಇಂದು) ಚಾಲನೆ ದೊರೆಯಲಿದೆ.

ಕಾವೇರಿ ಕಾಲೇಜು ಸಭಾಂಗಣದಲ್ಲಿ ಮಧ್ಯಾಹ್ನ 1.45 ಕ್ಕೆ ಕಾವೇರಿ ವಿದ್ಯಾಸಂಸ್ಥೆ ಅಧ್ಯಕ್ಷ ಡಾ.ಅಜ್ಜಿನಿಕಂಡ ಗಣಪತಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಕಾವೇರಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಕುಟ್ಟಂಡ ಜಿ. ಉತ್ತಪ್ಪ, ಕಾವೇರಿ ಕಾಲೇಜು ಪ್ರಾಂಶುಪಾಲರಾದ ಪ್ರೊ.ಸಿ.ಎಂ. ನಾಚಪ್ಪ, ಕೊಡಗು ಪ್ರೆಸ್‍ಕ್ಲಬ್ ಪ್ರಧಾನ ಕಾರ್ಯದರ್ಶಿ ಕೆ.ಬಿ. ಮಂಜುನಾಥ್, ಉಪಾಧ್ಯಕ್ಷ ಆರ್. ಸುಬ್ರಮಣಿ, ಸಂಘಟನಾ ಕಾರ್ಯದರ್ಶಿ ಎಂ.ಎ. ಅಜೀಜ್, ಕಾವೇರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಐನಂಡ ಸೋಮಣ್ಣ ಪಾಲ್ಗೊಳ್ಳಲಿದ್ದಾರೆ.

ಬರಹ ಕೌಶಲ್ಯ ವಿಷಯದ ಕುರಿತು ವಿಜಯ ಕರ್ನಾಟಕ ಜಿಲ್ಲಾ ವರದಿಗಾರ ಐತಿಚಂಡ ರಮೇಶ್ ಉತ್ತಪ್ಪ ವಿಷಯ ಮಂಡಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.