ಕುಶಾಲನಗರ, ಸೆ. 10: ಕುಶಾಲನಗರವನ್ನು ಕೇಂದ್ರವಾಗಿಸಿ ಕಾವೇರಿ ತಾಲೂಕು ರಚಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಜನಾಂದೋಲನದ ಅಂಗವಾಗಿ ಹಲವೆಡೆ ಸ್ಥಾನೀಯ ಸಮಿತಿಗಳನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಕೇಂದ್ರ ಸಮಿತಿ ರಚಿಸಿ ಹೋರಾಟ ಹಮ್ಮಿಕೊಳ್ಳಲಾಗುವದು ಎಂದು ಕಾವೇರಿ ತಾಲೂಕು ಹೋರಾಟ ಸಮಿತಿ ಪ್ರಮುಖರಾದ ವಿ.ಪಿ. ಶಶಿಧರ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಂಗಾಲದಿಂದ ಹಿಡಿದು ಗುಡ್ಡೆಹೊಸೂರುವರೆಗಿನ 8 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸ್ಥಾನೀಯ ಸಮಿತಿಗಳನ್ನು ರಚಿಸಲಾಗಿದೆ. ಅತ್ಯಂತ ಕ್ರಿಯಾಶೀಲ, ಪರಿಣಾಮಕಾರಿ ಸಮಿತಿಗಳನ್ನು ರಚಿಸಿದ್ದು, ಪ್ರತಿ ಸಮಿತಿಗೆ ಅಧ್ಯಕ್ಷರನ್ನು ನೇಮಿಸಿ ಜನರಲ್ಲಿ ಹೋರಾಟದ ಕಿಚ್ಚು ಮೂಡಿಸುವ ಕಾರ್ಯ ಪ್ರಗತಿಯಲ್ಲಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು. ತಿಂಗಳ ಅಂತ್ಯದೊಳಗೆ ಕಾವೇರಿ ತಾಲೂಕು ಬೇಡಿಕೆಗೆ ಸರಕಾರ ಮನ್ನಣೆ ಕುಶಾಲನಗರ, ಸೆ. 10: ಕುಶಾಲನಗರವನ್ನು ಕೇಂದ್ರವಾಗಿಸಿ ಕಾವೇರಿ ತಾಲೂಕು ರಚಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಜನಾಂದೋಲನದ ಅಂಗವಾಗಿ ಹಲವೆಡೆ ಸ್ಥಾನೀಯ ಸಮಿತಿಗಳನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಕೇಂದ್ರ ಸಮಿತಿ ರಚಿಸಿ ಹೋರಾಟ ಹಮ್ಮಿಕೊಳ್ಳಲಾಗುವದು ಎಂದು ಕಾವೇರಿ ತಾಲೂಕು ಹೋರಾಟ ಸಮಿತಿ ಪ್ರಮುಖರಾದ ವಿ.ಪಿ. ಶಶಿಧರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಂಗಾಲದಿಂದ ಹಿಡಿದು ಗುಡ್ಡೆಹೊಸೂರುವರೆಗಿನ 8 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸ್ಥಾನೀಯ ಸಮಿತಿಗಳನ್ನು ರಚಿಸಲಾಗಿದೆ. ಅತ್ಯಂತ ಕ್ರಿಯಾಶೀಲ, ಪರಿಣಾಮಕಾರಿ ಸಮಿತಿಗಳನ್ನು ರಚಿಸಿದ್ದು, ಪ್ರತಿ ಸಮಿತಿಗೆ ಅಧ್ಯಕ್ಷರನ್ನು ನೇಮಿಸಿ ಜನರಲ್ಲಿ ಹೋರಾಟದ ಕಿಚ್ಚು ಮೂಡಿಸುವ ಕಾರ್ಯ ಪ್ರಗತಿಯಲ್ಲಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು. ತಿಂಗಳ ಅಂತ್ಯದೊಳಗೆ ಕಾವೇರಿ ತಾಲೂಕು ಬೇಡಿಕೆಗೆ ಸರಕಾರ ಮನ್ನಣೆ ನಗರವನ್ನು ಕೇಂದ್ರವಾಗಿಟ್ಟುಕೊಂಡು ಹೊಸ ಕಾವೇರಿ ತಾಲೂಕು ರಚನೆಗೆ ಹೋರಾಟ ನಡೆಸಲು ಕೇಂದ್ರ ಸಮಿತಿ ವತಿಯಿಂದ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ಥಾನಿಯ ಸಮಿತಿಯನ್ನು ರಚನೆ ಮಾಡಲಾಯಿತು.

ಹೋರಾಟ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ನೇತೃತ್ವದಲ್ಲಿ ಹೋರಾಟದ ರೂಪರೇಷಗಳನ್ನು ಚರ್ಚಿಸಲಾಯಿತು. ರಾಜಕೀಯ ರಹಿತ ಸಮಿತಿಯನ್ನು ರಚಿಸಿ ಹೋರಾಟ, ಸರ್ವ ಪಕ್ಷಗಳ ಮುಖಂಡರನ್ನು ಸೇರಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಸಭೆಯಲ್ಲಿ ತಿರ್ಮಾನಿಸಲಾಯಿತು. ಈ ಸಂದರ್ಭ ಗುಡ್ಡೆಹೊಸೂರು ವಿಭಾಗದ ಸ್ಥಾನಿಯ ಸಮಿತಿ ಅಧ್ಯಕ್ಷರಾಗಿ ಕೆ.ಕೆ. ಪೂವಯ್ಯ, ಉಪಾಧ್ಯಕ್ಷರಾಗಿ ಶುಭಶೇಖರ್, ಸದಸ್ಯರಾಗಿ ಯೇಸು, ಬಿ.ಎಸ್. ಚಂದ್ರಶೇಖರ್, ಯತೀಶ್, ಜಿ.ಎಂ. ಸಲಿ, ಗೀತಾ ಧರ್ಮಪ್ಪ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಜಿ.ಎಂ. ವಿಶುಕುಮಾರ್ ಆಯ್ಕೆಯಾದರು. ಅಲ್ಲದೆ ಗ್ರಾ.ಪಂ. ವ್ಯಾಪ್ತಿಯ ವಿವಿಧ ಗ್ರಾಮಗಳ ಸಮಿತಿಯನ್ನು ರಚಿಸಲಾಯಿತು.

ಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಭಾರತಿ, ತಾ.ಪಂ. ಸದಸ್ಯೆ ಪುಷ್ಪ, ಜಿ.ಪಂ. ಮಾಜಿ ಸದಸ್ಯೆ ಸುಲೋಚನ, ಬಿ.ಎಸ್. ಚಂದ್ರಶೇಖರ್, ಎಂ.ಆರ್. ಉತ್ತಪ್ಪ ಮತ್ತು ಪಂಚಾಯಿತಿ ಸದಸ್ಯರಾದ ಕಾವೇರಪ್ಪ, ಭೀಮಯ್ಯ ಮತ್ತು ಗ್ರಾಮಸ್ಥರು ಹಾಜರಿದ್ದರು.

ಕೂಡಿಗೆ: ತೊರೆನೂರು ಸ್ಥಾನೀಯ ಸಮಿತಿಯ ಅಧ್ಯಕ್ಷ ಕೃಷ್ಣೇಗೌಡ ನೇತೃತ್ವದಲ್ಲಿ ಮನೆಮನೆಗೆ ಭೇಟಿ ನೀಡಿ ಕರಪತ್ರಗಳನ್ನು ಹಂಚುವದರ ಮೂಲಕ ಪಂಚಾಯಿತಿ ವ್ಯಾಪ್ತಿಯ ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘ-ಸಂಸ್ಥೆಯ ಮುಖಂಡರುಗಳನ್ನು ಸೇರಿಸಿ ಹೋರಾಟಕ್ಕೆ ಅಣಿಯಾಗುತ್ತಿದ್ದಾರೆ.

ಈ ಸಂದರ್ಭ ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ. ಪಾಂಡುರಂಗ, ಕಾರ್ಯದರ್ಶಿ ಜಗದೀಶ್, ಗೌರವಾಧ್ಯಕ್ಷ ಚಂದ್ರಪ್ಪ ಸೇರಿದಂತೆ ಗ್ರಾಮದ ಮುಖಂಡರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.