ಗೋಣಿಕೊಪ್ಪಲು, ಸೆ. 10: ಇಲ್ಲಿನ ಕಾವೇರಿ ಕಾಲೇಜಿನ ರಾಜ್ಯಶಾಸ್ತ್ರ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕೂರ್ಗ್ ಪಬ್ಲಿಕ್ ಶಾಲೆಯ ನಿವೃತ್ತ ಪ್ರಾಂಶುಪಾಲ ಪ್ರೊ. ಎಂ.ಡಿ. ನಂಜುಂಡ ಮೂಲಭೂತ ಹಕ್ಕುಗಳನ್ನು ಚಲಾಯಿಸಲು ನಾವು ಎಷ್ಟು ಪ್ರಾಮುಖ್ಯತೆಯನ್ನು ಕೊಡುತ್ತೇವೆಯೋ ಅಷ್ಟೇ ಪ್ರಾಮುಖ್ಯತೆಯನ್ನು ಮೂಲಭೂತ ಕರ್ತವ್ಯಗಳನ್ನು ಪಾಲಿಸುವದರಲ್ಲೂ ನೀಡಬೇಕು. ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಹುಟ್ಟಿನಿಂದಲೇ ಬಂದಿರುವಂತವು ಅದನ್ನು ಯಾರಿಂದಲೂ ತಡೆಯಲು ಸಾದ್ಯವಿಲ್ಲ, ವಿದ್ಯಾರ್ಥಿಗಳು ಉತ್ತಮ ಅಂಕಗಳಿಸುವದರ ಜೊತೆಗೆ ಕ್ರಿಯಾಶೀಲತೆ ಹಾಗೂ ಚುರುಕುತನವನ್ನು ಬೆಳೆಸಿಕೊಂಡು ಬದುಕನ್ನು ಸುಂದರವಾಗಿಸಿಕೊಳ್ಳಬೇಕೆಂದರು. ಈ ಸಂದರ್ಭ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಪ್ರೊ. ನಂಜುಂಡ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಎ. ಪೂವಣ್ಣ ಅಧÀ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲೆÀ ಪ್ರೊ. ಎಂ.ಡಿ. ಅಕ್ಕಮ್ಮ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕಿ ಸಿ.ಟಿ. ಕಾವ್ಯ ಉಪಸ್ಥಿತರಿದ್ದರು. ಆಶಿಕ ಸ್ವಾಗತಿಸಿ, ಮದನ್ ಕುಮಾರ್ ವಂದಿಸಿದರು. ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.