ಕುಶಾಲನಗರ, ಸೆ. 10: ರಾಷ್ಟ್ರೀಯ ಹೆದ್ದಾರಿ ಒತ್ತಿನಲ್ಲಿ ಅಕ್ರಮವಾಗಿ ಬಹುಮಹಡಿ ಕಟ್ಟಡ ನಿರ್ಮಾಣ ಮಾಡುತ್ತಿರುವ ಹಿನ್ನಲೆಯಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಅಕ್ರಮ ಕಟ್ಟಡವನ್ನು ತೆರವುಗೊಳಿಸಿದ ಕಾರ್ಯಾಚರಣೆ ಭಾನುವಾರ ಮುಂಜಾನೆ ನಡೆದಿದೆ.

ಮಡಿಕೇರಿ ರಸ್ತೆಯ ತಾವರೆಕೆರೆ ಬಳಿ ಇಮ್ತಿಯಾಜ್ ಎಂಬವರು ಪಂಚಾಯಿತಿಯ ಅನುಮತಿ ಇಲ್ಲದೆ ಕುಶಾಲನಗರ, ಸೆ. 10: ರಾಷ್ಟ್ರೀಯ ಹೆದ್ದಾರಿ ಒತ್ತಿನಲ್ಲಿ ಅಕ್ರಮವಾಗಿ ಬಹುಮಹಡಿ ಕಟ್ಟಡ ನಿರ್ಮಾಣ ಮಾಡುತ್ತಿರುವ ಹಿನ್ನಲೆಯಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಅಕ್ರಮ ಕಟ್ಟಡವನ್ನು ತೆರವುಗೊಳಿಸಿದ ಕಾರ್ಯಾಚರಣೆ ಭಾನುವಾರ ಮುಂಜಾನೆ ನಡೆದಿದೆ.

ಮಡಿಕೇರಿ ರಸ್ತೆಯ ತಾವರೆಕೆರೆ ಬಳಿ ಇಮ್ತಿಯಾಜ್ ಎಂಬವರು ಪಂಚಾಯಿತಿಯ ಅನುಮತಿ ಇಲ್ಲದೆ ಇದೀಗ 4 ಮಹಡಿಗಳ ಕಟ್ಟಡ ನಿರ್ಮಿಸುತ್ತಿರುವದು ಗಮನಕ್ಕೆ ಬಂದ ಹಿನೆÀ್ನಲೆಯಲ್ಲಿ ಪಂಚಾಯಿತಿ ಸಿಬ್ಬಂದಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ ಎಂದು ಶ್ರೀಧರ್ ತಿಳಿಸಿದ್ದು, ಕಟ್ಟಡ ನಿರ್ಮಾಣ ಕಾಮಗಾರಿಗೆ ಬಳಸಿದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಟ್ಟಡ ಮಾಲೀಕರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವದು ಎಂದಿದ್ದಾರೆ.

ಜಿಲ್ಲಾಧಿಕಾರಿಗಳ ಸೂಚನೆಯಂತೆ ಈ ಕಾರ್ಯಾಚರಣೆ ನಡೆದಿದ್ದು ಇತ್ತೀಚೆಗೆ ಕುಶಾಲನಗರದಲ್ಲಿ ಹಲವು ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗಿತ್ತು. ಮಾಲೀಕರುಗಳಿಗೆ ತೆರವುಗೊಳಿಸಲು ಗಡುವು ನೀಡಿದ್ದರೂ ಯಾವದೇ ರೀತಿಯ ಸ್ಪಂದನೆ ದೊರಕದ ಹಿನ್ನಲೆಯಲ್ಲಿ ಕಟ್ಟಡ ಮಾಲೀಕರುಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಎಂದು ಶ್ರೀಧರ್ ತಿಳಿಸಿದ್ದಾರೆ.