ಗೋಣಿಕೊಪ್ಪಲು, ಸೆ. 10: ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಾಲೆ ಪಟ್ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸುಮಾರು ರೂ. 3.31 ಲಕ್ಷ ವೆಚ್ಚದ ಅಡುಗೆ ಕೋಣೆ ನಿರ್ಮಾಣಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯೆ ಪಂಕಜ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭ ತಾ.ಪಂ. ಸದಸ್ಯೆ ಆಶಾ ಜೇಮ್ಸ್, ಗ್ರಾ.ಪಂ. ಅಧ್ಯಕ್ಷ ಶಿವಕುಮಾರ್, ಸದಸ್ಯ ಮುತ್ತ, ಮುಖ್ಯ ಶಿಕ್ಷಕ ವೆಂಕಟೇಶ್, ಎಸ್‍ಡಿಎಂಸಿ ಅಧ್ಯಕ್ಷ ದಿನೇಶ್, ಸದಸ್ಯ ಪೆಮ್ಮಯ್ಯ, ಗುತ್ತಿಗೆದಾರ ಅಜ್ಜಿನಿಕಂಡ ಪೊನ್ನಪ್ಪ, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.