ಸುಂಟಿಕೊಪ್ಪ, ಸೆ. 10: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಸುಂಟಿಕೊಪ್ಪ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ಕನ್ನಡ ವೃತ್ತದಲ್ಲಿ ಗೌರಿ ಲಂಕೇಶ್ ಭಾವಚಿತ್ರಕ್ಕೆ ಮೊಂಬತ್ತಿ ಹಚ್ಚುವ ಮೂಲಕ ಶೃದ್ಧಾಂಜಲಿ ಅರ್ಪಿಸಲಾಯಿತು.

ಗ್ರಾಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ್, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಹೆಚ್.ಯು. ಇಸಾಕ್, ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಸಂದರ್ಭ ಸುಂಟಿಕೊಪ್ಪ ಗ್ರಾಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಉಸ್ಮಾನ್, ಕಾರ್ಯದರ್ಶಿ ಇಬ್ರಾಹಿಂ, ರಜಾಕ್, ಲತೀಫ್, ಮುಬಾರಕ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.