ಗೋಣಿಕೊಪ್ಪಲು, ಸೆ. 10: ವನವಾಸಿ ಕಲ್ಯಾಣ ಸಂಸ್ಥೆಯ ವತಿಯಿಂದ ತಾ. 14 ರಂದು ಆದಿವಾಸಿಗಳಿಗೆ ರಾಜ್ಯಮಟ್ಟದ ಬಿಲ್ಲುಗಾರಿಕೆ ಮತ್ತು ಮೋಡ್ರನ್ ಖೋ-ಖೋ ಕ್ರೀಡಾಕೂಟ ಏರ್ಪಡಿಸಲಾಗಿದೆ ಎಂದು ವನವಾಸಿ ಕಲ್ಯಾಣ ಸಂಸ್ಥೆಯ ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್ ತಿಳಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಣಿಕೊಪ್ಪ ಕಾವೇರಿ ಕಾಲೇಜು ಮೈದಾನದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ರಾಜ್ಯದ 16 ಜಿಲ್ಲೆಗಳಿಂದ ಸುಮಾರು 300 ಕ್ರೀಡಾಪಟುಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ರಾಜ್ಯದ 16 ಜಿಲ್ಲೆಗಳಲ್ಲಿ ವನವಾಸಿ ಕಲ್ಯಾಣ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದು, ಈ ಭಾಗಗಳಿಂದ ಆಯ್ದ ಕ್ರೀಡಾಪಟುಗಳು ಗೋಣಿಕೊಪ್ಪಲು, ಸೆ. 10: ವನವಾಸಿ ಕಲ್ಯಾಣ ಸಂಸ್ಥೆಯ ವತಿಯಿಂದ ತಾ. 14 ರಂದು ಆದಿವಾಸಿಗಳಿಗೆ ರಾಜ್ಯಮಟ್ಟದ ಬಿಲ್ಲುಗಾರಿಕೆ ಮತ್ತು ಮೋಡ್ರನ್ ಖೋ-ಖೋ ಕ್ರೀಡಾಕೂಟ ಏರ್ಪಡಿಸಲಾಗಿದೆ ಎಂದು ವನವಾಸಿ ಕಲ್ಯಾಣ ಸಂಸ್ಥೆಯ ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಣಿಕೊಪ್ಪ ಕಾವೇರಿ ಕಾಲೇಜು ಮೈದಾನದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ರಾಜ್ಯದ 16 ಜಿಲ್ಲೆಗಳಿಂದ ಸುಮಾರು 300 ಕ್ರೀಡಾಪಟುಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ರಾಜ್ಯದ 16 ಜಿಲ್ಲೆಗಳಲ್ಲಿ ವನವಾಸಿ ಕಲ್ಯಾಣ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದು, ಈ ಭಾಗಗಳಿಂದ ಆಯ್ದ ಕ್ರೀಡಾಪಟುಗಳು ಇದೇ ವಿಭಾಗದ ಮೋಡ್ರನ್ ಖೋಖೋ (7+2) ಆಟಗಾರರ ಪಂದ್ಯಾವಳಿ ನಡೆಯಲಿದೆ ಎಂದರು.

ವನವಾಸಿ ಕಲ್ಯಾಣ ಸಂಸ್ಥೆಯ ಮುಖಾಂತರ ವನವಾಸಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ಶೈಕ್ಷಣಿಕ, ಆರ್ಥಿಕ, ಆರೋಗ್ಯ ಹಾಗೂ ಸಂಸ್ಕøತಿ ಕ್ರೀಡೆಯನ್ನು ಉಳಿಸುವ ಹಾಗೂ ಉತ್ತೇಜಿಸುವ ನಿಟ್ಟಿನಲ್ಲಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ವನವಾಸಿಗಳು ದೈಹಿಕವಾಗಿ ಸದೃಢವಾಗಿದ್ದು, ಇವರಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ತರಬೇತಿಯನ್ನು ನೀಡಿ ಒಲಂಪಿಕ್ಸ್, ಕಾಮನ್‍ವೇಲ್ತ್, ರಾಜ್ಯ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಪಾಲ್ಗೊಳ್ಳುವಂತೆ ಕಾರ್ಯ ನಿರ್ವಹಿಸುತ್ತಿದೆ. ಇದಕ್ಕಾಗಿ ಪ್ರತಿ ನಾಲ್ಕು ವರ್ಷಕೊಮ್ಮೆ ಒಲಂಪಿಕ್ಸ್ ಮಾದರಿಯಲ್ಲಿ ಕ್ರೀಡಾಕೂಟಗಳನ್ನು ಆಯೋಜನೆ ಮಾಡಲಾಗುತ್ತಿದೆ. ಭಾರತದ ಪುರಾತನ ಕ್ರೀಡೆಯಾದ ಬಿಲ್ಲುಗಾರಿಕೆಯನ್ನು ಪ್ರತಿ ವರ್ಷ ನಡೆಸಿಕೊಂಡು ಬರಲಾಗುತ್ತಿದೆ. ಕ್ರೀಡಾಕೂಟ ರೂ. 4 ಲಕ್ಷ ವೆಚ್ಚದಲ್ಲಿ ನಡೆಯಲಿದೆ ಎಂದರು.

ಗೋಷ್ಠಿಯಲ್ಲಿ ವನವಾಸಿ ಕಲ್ಯಾಣ ಸಂಸ್ಥೆಯ ಜಿಲ್ಲಾ ಸಮಿತಿ ಅಧ್ಯಕ್ಷ ಪಿ.ಪಿ. ಸಿದ್ಧ, ಜಿಲ್ಲಾ ಸಮಿತಿ ಕಾರ್ಯದರ್ಶಿ ಎಂ.ಎನ್. ಕೃಷ್ಣ, ಸದಸ್ಯರುಗಳಾದ ವೈ.ಎಂ. ಪ್ರಕಾಶ್, ಅನುಪ್ ಕುಮಾರ್ ಉಪಸ್ಥಿತರಿದ್ದರು.