ಸೋಮವಾರಪೇಟೆ, ಸೆ. 12: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕೂತಿ ಗ್ರಾಮದಲ್ಲಿ ಶಾಸಕರ ಅನುದಾನ ಮತ್ತು ಜಿಲ್ಲಾ ಪಂಚಾಯತ್ ಅನುದಾನದಡಿ ಮುಕ್ತಾಯಗೊಂಡಿರುವ ನೂತನ ರಸ್ತೆಯನ್ನು ಶಾಸಕ ಅಪ್ಪಚ್ಚು ರಂಜನ್ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳು ನಿರ್ಮಾಣವಾಗುವ ಸಂದರ್ಭ ಸ್ಥಳೀಯರು ಅಗತ್ಯ ಜಾಗವನ್ನು ಬಿಟ್ಟುಕೊಡಬೇಕು. ಸಮರ್ಪಕ ಚರಂಡಿಗಳಿದ್ದರೆ ಮಾತ್ರ ರಸ್ತೆಗಳೂ ಬಾಳಿಕೆ ಬರುತ್ತವೆ. ಗ್ರಾಮದ ರಸ್ತೆಯನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವದು ಗ್ರಾಮಸ್ಥರ ಕರ್ತವ್ಯವಾಗಬೇಕು ಎಂದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಜೆ. ದೀಪಕ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ, ತಾ.ಪಂ. ಸದಸ್ಯ ಧರ್ಮಪ್ಪ, ಗ್ರಾ.ಪಂ. ಸದಸ್ಯರಾದ ರಜಿತ್, ಬಸವರಾಜ್, ಗ್ರಾಮದ ಅಧ್ಯಕ್ಷ ಪರಮೇಶ್, ಸಹಕಾರ ಬ್ಯಾಂಕ್ ಅಧ್ಯಕ್ಷ ಕೆ.ಟಿ. ಪರಮೇಶ್, ಹಿರಿಯರಾದ ಜೋಯಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.