ಮಡಿಕೇರಿ, ಸೆ. 12: ನಾಪೋಕ್ಲು ಗ್ರಾಮ ಪಂಚಾಯಿತಿ ಗ್ರಾಮ ಲೆಕ್ಕಿಗ ಅನೂಪ್ ಸಬಾಸ್ಟಿನ್ ಹಾಗೂ ಗ್ರಾಮ ಸಹಾಯಕ ಪೂಣಚ್ಚ ಇವರುಗಳ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಇಂದು ಕೊಡಗು ಜಿಲ್ಲಾ ಕಂದಾಯ ಇಲಾಖಾ ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.