*ಗೋಣಿಕೊಪ್ಪಲು, ಸೆ. 12: ಕ್ರೀಡಾ ಪತಿಭೆಗಳಿಗೆ ಹೆಚ್ಚಿನ ಅವಕಾಶಗಳು ದೊರೆತು ಜಿಲ್ಲೆಯ ಕ್ರೀಡಾ ಪತಾಕೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹಾರುವಂತೆ ಮಾಡಲು ವಿದ್ಯಾರ್ಥಿಗಳನ್ನು ರೂಪುಗೊಳಿಸುವ ಕಾರ್ಯ ದೈಹಿಕ ಶಿಕ್ಷಕರಿಂದ ನಡೆಯಬೇಕಾಗಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ತಿಳಿಸಿದರು.

ಪೆÇನ್ನಂಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಎರಡು ದಿನಗಳ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆಗಳಿಂದ ಮಕ್ಕಳಲ್ಲಿ ದೈಹಿಕ ಸಾಮಥ್ರ್ಯ ಹೆಚ್ಚುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ತರಬೇತುಗೊಳಿಸಬೇಕಾದ ಅಗತ್ಯವಿದೆ. ಶಿಕ್ಷಕರು ವಿದ್ಯಾರ್ಥಿಗಳನ್ನು ರೂಪುಗೊಳಿಸುವ ಮೂಲಕವೇ ದೇಶದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ತಾ.ಪಂ. ಅಧ್ಯಕ್ಷೆ ಬೊಳ್ಳಚಂಡ *ಗೋಣಿಕೊಪ್ಪಲು, ಸೆ. 12: ಕ್ರೀಡಾ ಪತಿಭೆಗಳಿಗೆ ಹೆಚ್ಚಿನ ಅವಕಾಶಗಳು ದೊರೆತು ಜಿಲ್ಲೆಯ ಕ್ರೀಡಾ ಪತಾಕೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಹಾರುವಂತೆ ಮಾಡಲು ವಿದ್ಯಾರ್ಥಿಗಳನ್ನು ರೂಪುಗೊಳಿಸುವ ಕಾರ್ಯ ದೈಹಿಕ ಶಿಕ್ಷಕರಿಂದ ನಡೆಯಬೇಕಾಗಿದೆ ಎಂದು ಶಾಸಕ ಕೆ.ಜಿ. ಬೋಪಯ್ಯ ತಿಳಿಸಿದರು.

ಪೆÇನ್ನಂಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಎರಡು ದಿನಗಳ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆಗಳಿಂದ ಮಕ್ಕಳಲ್ಲಿ ದೈಹಿಕ ಸಾಮಥ್ರ್ಯ ಹೆಚ್ಚುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ತರಬೇತುಗೊಳಿಸಬೇಕಾದ ಅಗತ್ಯವಿದೆ. ಶಿಕ್ಷಕರು ವಿದ್ಯಾರ್ಥಿಗಳನ್ನು ರೂಪುಗೊಳಿಸುವ ಮೂಲಕವೇ ದೇಶದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ತಾ.ಪಂ. ಅಧ್ಯಕ್ಷೆ ಬೊಳ್ಳಚಂಡ ಗುಣಗಳನ್ನು ಬೆಳೆಸಿಕೊಂಡು ಗುರಿಯತ್ತ ಸಾಗಬೇಕು ಎಂದು ಸಲಹೆ ನೀಡಿದರು. ತಾ.ಪಂ. ಅಧ್ಯಕ್ಷೆ ಸ್ಮಿತಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯೆ ಶ್ರೀಜಾ ಸಾಜಿ ಅಚ್ಚುತ್ತನ್ ಮೇಲಾಟಗಳ ಉದ್ಘಾಟನೆ ನೆರವೇರಿಸಿದರು. ಚೆಪ್ಪುಡಿರ ಅರುಣ್ ಮಾಚಯ್ಯ ಕ್ರೀಡಾ ಜ್ಯೋತಿ ಬೆಳಗಿಸಿದರು. ತಾ.ಪಂ. ಸದಸ್ಯರುಗಳಾದ ಪಿ.ಟಿ. ಸರೋಜ, ಎ.ಪಿ. ಸೀತಮ್ಮ, ಮಾಳೆಟ್ಟಿರ ಪ್ರಶಾಂತ್ ಉತ್ತಪ್ಪ, ಬಿ.ಕೆ. ಸುಮಾ, ಆಶಾ ಜೇಮ್ಸ್, ಎಂ.ಬಿ. ಸುನಿತಾ, ಕ್ರೀಡಾ ತಾಲೂಕು ತಾಲೂಕು ಕ್ರೀಡಾಕೂಟ ಅಧ್ಯಕ್ಷ ಜಿ.ಎಲ್. ಲೋಕೇಶ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎಸ್.ಪಿ. ಮಹದೇವಾ, ತಾಲೂಕು ಶಿಕ್ಷಣ ಪರಿವೀಕ್ಷಕಿ ಪಿ.ಡಿ. ರತಿ, ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಉತ್ತಪ್ಪ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್. ಸುಬ್ಬಯ್ಯ, ಕಾರ್ಯದರ್ಶಿ ಪ್ರಭುಕುಮಾರ್, ಕೀಡಾಕೂಟ ಮೇಲ್ವಿಚಾರಕಿ ಚಂದನ ಡಿ. ಸಮೂಹ ಸಂಪನ್ಮೂಲ ವ್ಯಕ್ತಿ ಟಿ.ವಿ. ಜೀವನ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮಾನಂದ ಹಾಜರಿದ್ದರು. ಈ ಸಂದರ್ಭ ಪೆÇನ್ನಂಪೇಟೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಕೋಲಾಟ, ಅಪ್ಪಚ್ಚ ಕವಿ ಶಾಲಾ ವಿದ್ಯಾರ್ಥಿಗಳಿಂದ ಉಮ್ಮತ್ತಾಟ್ ಪ್ರದರ್ಶನ ನಡೆಯಿತು.

ಪೆÇನ್ನಂಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಎರಡು ದಿನಗಳ ಕ್ರೀಡಾಕೂಟದಲ್ಲಿ ಪೆÇನ್ನಂಪೇಟೆ, ಹುದಿಕೇರಿ, ವೀರಾಜಪೇಟೆ, ಶ್ರೀಮಂಗಲ, ಅಮ್ಮತ್ತಿ, ಬಾಳೆಲೆ ಹೋಬಳಿಯ ಶಾಲಾ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.