ನಾಪೋಕ್ಲು ಸೆ. 12: ಕಕ್ಕಬೆ-ಕುಂಜಿಲ ಗ್ರಾಮ ಪಂಚಾಯಿತಿಗೆ ಒಳಪಟ್ಟ ನಾಲಡಿ ಅಂಗನವಾಡಿ ಕೇಂದ್ರದಲ್ಲಿ ಕಕ್ಕಬೆ ಗ್ರಾಮ ಪಂಚಾಯಿತಿಗೆ ಒಳಪಟ್ಟ ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ದಿನದ ಪೌಷ್ಟಿಕ ಆಹಾರ ತರಬೇತಿಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ನಾಲಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವೃಂದ, ಸ್ವಸಹಾಯ ಸಂಘ ಹಾಗೂ ಸ್ತ್ರೀಶಕ್ತಿ ಸಂಘದ ಸದಸ್ಯರು, ಮಕ್ಕಳು ಹಾಜರಿದ್ದರು.