ಮಡಿಕೇರಿ, ಸೆ. 12: ಅಲ್ಪ ಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2016-17 ನೇ ಸಾಲಿನಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿರುವ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕ್ರಮವಾಗಿ ಶೇ. 95 ಮತ್ತು ಶೇ. 90 ಕ್ಕಿಂತ ಹೆಚ್ಚಿನ ಅಂಕ ಪಡೆದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ) ಪ್ರೋತ್ಸಾಹ aಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಇಚ್ಛೆಯುಳ್ಳ ವಿದ್ಯಾರ್ಥಿಗಳು ಇಲಾಖಾ ವೆಬ್‍ಸೈಟ್: ತಿತಿತಿ. goಞಜom.ಞಚಿಡಿ.ಟಿiಛಿ.iಟಿ ರಲ್ಲಿ ಆನ್‍ಲೈನ್ ಅರ್ಜಿ ತಾ. 30 ರೊಳಗೆ ಸಲ್ಲಿಸಲು ಕೋರಿದೆ. ಕಚೇರಿ ದೂರವಾಣಿ ಸಂಖ್ಯೆ: 08272-225628 ನ್ನು ಸಂಪರ್ಕಿಸಬಹುದು. ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರ ಸೌಲಭ್ಯಗಳ ಮಾಹಿತಿ ಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ವಿ. ಸುರೇಶ್ ಕೋರಿದ್ದಾರೆ.