ಕೂಡಿಗೆ, ಸೆ. 12: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಕೂಡುಮಂಗಳೂರು ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದೆ, ಚರಂಡಿಯಲ್ಲಿ ಹರಿಯಬೇಕಾದ ಕೊಳಚೆ ನೀರು ಜನಸಾಮಾನ್ಯರು ಓಡಾಡುವ ರಸ್ತೆಯಲ್ಲಿ ಹರಿಯುತ್ತಿದೆ. ಹೆಸರಿಗೆ ಮಾತ್ರ ಚರಂಡಿಗಳು ಇದ್ದು, ಇತ್ತೀಚಿನ ದಿನಗಳಲ್ಲಿ ಬಿದ್ದ ಮಳೆಯ ನೀರು ಸೇರಿದಂತೆ ಚರಂಡಿಯಲ್ಲಿ ಇರಬೇಕಾದ ಕೊಳಚೆ ನೀರು ರಸ್ತೆಯಲ್ಲಿ ಹರಿಯುವಂತಾಗಿದೆ.

ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತುರ್ತಾಗಿ ಕ್ರಮಕೈಗೊಳ್ಳುವುದರ ಮೂಲಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕೆಂದು ಈ ವ್ಯಾಪ್ತಿಯ ಗ್ರಾಮಸ್ಥರುಗಳಾದ ಮಂಜುನಾಥ್, ಜಗದೀಶ್, ಕಿಶೋರ್, ರವೀಂದ್ರ ಮೊದಲಾದವರು ಆಗ್ರಹಿಸಿದ್ದಾರೆ.