ಸೋಮವಾರಪೇಟೆ, ಸೆ. 12: ಪಟ್ಟಣದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಉದ್ಯಮಿ ಹರಪಳ್ಳಿ ರವೀಂದ್ರ ಅವರು ಗಣಕಯಂತ್ರವನ್ನು ಉಚಿತವಾಗಿ ನೀಡಿದರು.

ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ಎಸ್‍ಡಿಎಂಸಿ ಅಧ್ಯಕ್ಷ ಕುಶಾಲಪ್ಪ, ಮುಖ್ಯ ಶಿಕ್ಷಕಿ ಎಂ.ಜೆ. ಅಣ್ಣಮ್ಮ, ಶಿಕ್ಷಕರಾದ ರಮೇಶ್, ಚಂದ್ರಕಲಾ, ಆಶಾಲತ, ದಿ. ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.