ಮಡಿಕೇರಿ, ಸೆ.11: ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಮಡಿಕೇರಿ, ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ, ಚೆಂಬು, ಪೆರಾಜೆ, ಮದೆನಾಡು ಮತ್ತು ಗಾಳಿಬೀಡು ಗ್ರಾಮ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಂಪಾಜೆ ಚಡಾವು ಆದರ್ಶ ಫ್ರೆಂಡ್ಸ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ-ಸ್ವಸಹಾಯ ಸಂಘಗಳ ಒಕ್ಕೂಟ ಸಂಪಾಜೆ ಮತ್ತು ಪೆರಾಜೆ ಹಾಗೂ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಲಯನ್ಸ್ ಕ್ಲಬ್ ಸಂಪಾಜೆ ಇವರ ಆಶ್ರಯದಲ್ಲಿ ತಾ. 13 ರಂದು ಬೆಳಗ್ಗೆ 10 ಗಂಟೆಗೆ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಲಿದೆ.

ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಬಾಲಚಂದ್ರ ಕಳಗಿ, ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಅಮೃತ ಟಿ.ಅಪ್ಪಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಕುಮಾರ್, ಮಡಿಕೇರಿ ತಾ.ಆರೋಗ್ಯ ವೈದ್ಯಾಧಿಕಾರಿ ಡಾ.ಪಾರ್ವತಿ, ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ, ಸಂಪಾಜೆ ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿ ಡಾ.ಜಯರಾಮ್, ಸಂಪಾಜೆ ಪ್ರಾ.ಆ.ಕೇಂದ್ರದ ಗೌರವ ವೈದ್ಯಾಧಿಕಾರಿ ಡಾ.ಜಿ.ಕೆ.ಸುಬ್ರಮಣ್ಯ ಭಟ್ ಇತರರು ಪಾಲ್ಗೊಳ್ಳಲಿದ್ದಾರೆ.