ಕೂಡಿಗೆ, ಸೆ. 14: ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಮತ್ತು ಹಾಕಿ ಪಂದ್ಯಾವಳಿಗಳು ಕ್ರೀಡಾಶಾಲೆಯ ಮೈದಾನದಲ್ಲಿ ನಡೆಯಿತು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಮೂಲಕ ತನ್ನ ಪ್ರತಿಭೆಯನ್ನು ಹೆಚ್ಚಿಸಿಕೊಂಡು ಉನ್ನತ ಮಟ್ಟಕ್ಕೆ ಸಾಗಲು ಅನುಕೂಲವಾಗುತ್ತದೆ. ವಿದ್ಯಾರ್ಥಿಗಳಿಗೆ ಪಠ್ಯ ಚಟುವಟಿಕೆ ಎಷ್ಟು ಮುಖ್ಯವೋ, ಪಠ್ಯೋತರ ಚಟುವಟಿಕೆಗಳು ಅಷ್ಟೇ ಮುಖ್ಯವಾಗಿರುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೂಡಿಗೆ ಕ್ರೀಡಾಶಾಲೆಯ ಮುಖ್ಯೋಪಾಧ್ಯಾಯಿನಿ ಕುಂತಿ ಬೋಪಯ್ಯ ಮಾತನಾಡಿ, ಪಠ್ಯವು ವಿನಯವನ್ನು ಕಲಿಸುತ್ತದೆ, ಕ್ರೀಡೆಯು ಆರೋಗ್ಯವಂತರನ್ನಾಗಿಸಿ ಮಾನಸಿಕ ಮತ್ತು ದೈಹಿಕ ದೃಢತೆ ನೀಡುತ್ತದೆ ಎಂದರು.

ಶಕ ಸ್ವಾಮಿ ಗುಡ್ಡಗಾಡು ಪಂದ್ಯಾಟಕ್ಕೆ ಚಾಲನೆ ನೀಡಿದರು. ಕ್ರೀಡಾಕೂಟ ಉದ್ಘಾಟನೆಯನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ನೆರವೇರಿಸಿ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವಿಕೆಯ ಮೂಲಕ ತನ್ನ ಪ್ರತಿಭೆಯನ್ನು ಹೆಚ್ಚಿಸಿಕೊಂಡು ಉನ್ನತ ಮಟ್ಟಕ್ಕೆ ಸಾಗಲು ಅನುಕೂಲವಾಗುತ್ತದೆ. ವಿದ್ಯಾರ್ಥಿಗಳಿಗೆ ಪಠ್ಯ ಚಟುವಟಿಕೆ ಎಷ್ಟು ಮುಖ್ಯವೋ, ಪಠ್ಯೋತರ ಚಟುವಟಿಕೆಗಳು ಅಷ್ಟೇ ಮುಖ್ಯವಾಗಿರುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೂಡಿಗೆ ಕ್ರೀಡಾಶಾಲೆಯ ಮುಖ್ಯೋಪಾಧ್ಯಾಯಿನಿ ಕುಂತಿ ಬೋಪಯ್ಯ ಮಾತನಾಡಿ, ಪಠ್ಯವು ವಿನಯವನ್ನು ಕಲಿಸುತ್ತದೆ, ಕ್ರೀಡೆಯು ಆರೋಗ್ಯವಂತರನ್ನಾಗಿಸಿ ಮಾನಸಿಕ ಮತ್ತು ದೈಹಿಕ ದೃಢತೆ ನೀಡುತ್ತದೆ ಎಂದರು. ಅಧ್ಯಕ್ಷ ಕುಮಾರಸ್ವಾಮಿ, ಪ್ರಾಂಶುಪಾಲರ ಸಂಘದ ಮಾಜಿ ಅಧ್ಯಕ್ಷ ಕೆಂಚಪ್ಪ, ಉಪನ್ಯಾಸಕರ ಸಂಘದ ಪ್ರಧಾನ ಕಾರ್ಯದರ್ಶಿ ಫಿಲಿಪ್‍ವಾಸು, ಸಂಘಟನಾ ಕಾರ್ಯದರ್ಶಿ ಹಂಡ್ರಂಗಿ ನಾಗರಾಜ್, ಪದವಿಪೂರ್ವ ಕಾಲೇಜಿನ ಅಧೀಕ್ಷಕಿ ವಿಜಯಲಕ್ಷ್ಮಿ ಇದ್ದರು.

ನಂತರ ನಡೆದ ಹಾಕಿ ಪಂದ್ಯಾವಳಿಯಲ್ಲಿ ಮಾದಾಪುರ ಪ.ಪೂ ಕಾಲೇಜು ಪ್ರಥಮ, ಸೋಮವಾರಪೇಟೆ ಸೆಂಟ್ ಜೋಸೆಫ್ ಕಾಲೇಜು ದ್ವಿತೀಯ ಸ್ಥಾನ ಪಡೆದವು.

ಅಥ್ಲೆಟಿಕ್ಸ್ ಮತ್ತು ಹಾಕಿ ಕ್ರೀಡಾಕೂಟದಲ್ಲಿ ತಾಲೂಕಿನ ಪದವಿ ಪೂರ್ವ ಕಾಲೇಜುಗಳ ಕ್ರೀಡಾಪಟುಗಳು ಭಾಗವಹಿಸಿದ್ದರು.

ಉಪನ್ಯಾಸಕ ರಮೇಶ್ ನಿರೂಪಿಸಿ, ಸತೀಶ್ ಸ್ವಾಗತಿಸಿ, ನಾಗಪ್ಪ ವಂದಿಸಿದರು.