ಗೋಣಿಕೊಪ್ಪಲು, ಸೆ. 15: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಮಂಡಳಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ರೈತರ ಕ್ಷಮೆಯಾಚಿಸ ಬೇಕೆಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಯೆಟ್ನಾಂನಿಂದ ಕರಿಮೆಣಸು ಆಮದು ಮಾಡಿಕೊಂಡು ಇಲ್ಲಿನ ಮೆಣಸಿನೊಂದಿಗೆ ಬೆರೆಸಿ ಕಲಬೆರಕೆ ಮಾಡಿ ಅಂತರ್ರಾಷ್ಷ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಲಾಭ ಪಡೆದುಕೊಳ್ಳುತ್ತಿದ್ದಾರೆ. ಇದರಿಂದ ಇಲ್ಲಿನ ಬೆಳೆಗಾರರಿಗೆ ಆರ್ಥಿಕ ಹೊಡೆತ ಬಿದ್ದಿದೆ. ಈ ಅವ್ಯವಹಾರವನ್ನು ಕಾಂಗ್ರೆಸ್ ಪಕ್ಷದ ನಾಮನಿರ್ದೇಶಿತ ಸದಸ್ಯರು ಬಯಲಿಗೆಳೆಯುವ ಮೂಲಕ ಕಾಳಜಿ ಮೆರೆದಿದ್ದಾರೆ. ಕಾಂಗ್ರೆಸ್ ಪಕ್ಷ ಕೂಡ ಆರ್‍ಎಂಸಿಗೆ ಮುತ್ತಿಗೆ ಹಾಕುವ ಮೂಲಕ ಹೋರಾಟ ಮಾಡಿದೆÉ. ಆರ್‍ಎಂಸಿ ಆಡಳಿತ ಮಂಡಳಿ ಈ ಬಗ್ಗೆ ಎಚ್ಚೆತ್ತು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ರೈತರ ಕ್ಷಮೆಯಾಚಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನಿಯೋಗ ತೆರಳಿ ಇಲ್ಲಿನ ಚಿತ್ರಣವನ್ನು ತಿಳಿಸುವ ಪ್ರಯತ್ನ ಮಾಡುತ್ತೇವೆ. 15 ದಿನದೊಳಗೆ ರಾಜೀನಾಮೆ ನೀಡದಿದ್ದಲ್ಲಿ ಯುವ ಕಾಂಗ್ರೆಸ್ ಹೋರಾಟ ಮಾಡುವ ಮೂಲಕ ಯುವಶಕ್ತಿ ಪ್ರದರ್ಶನ ಮಾಡುತ್ತೇವೆ. ತನಿಖೆಯನ್ನು ಎಸಿಬಿ ಅಥವಾ ಸಿಓಡಿಗೆ ನೀಡಬೇಕು. ಆರ್‍ಎಂಸಿಯನ್ನು ಸೂಪರ್ ಸೀಡ್ ಮಾಡಬೇಕೆಂದು ಮುಖ್ಯಮಂತ್ರಿ ಬಳಿ ಮನವಿ ಮಾಡಿಕೊಳ್ಳುತ್ತೇವೆ. ಪ್ರಕರಣದ ತಾರ್ಕಿಕ ಅಂತ್ಯದ ವರೆಗೂ ಕಾಂಗ್ರೆಸ್ ಹೋರಾಟ ಮಾಡಲಿದೆ. ಇದಕ್ಕೆ ಯುವ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡುತ್ತದೆ ಎಂದರು. ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಮುರುಗಾ ಮಾತನಾಡಿ, ಆರ್‍ಎಂಸಿ ಆಡಳಿತ ಮಂಡಳಿ ಅವ್ಯವಹಾರದಲ್ಲಿ ನೇರವಾಗಿ ಶಾಮೀಲಾಗಿದೆÉ. ರಾಜೀನಾಮೆ ನೀಡಬೇಕು. ಸಂಸದರಿಗೆ ಮನವಿ ನೀಡುವ ಮೂಲಕ ಪ್ರಕರಣದ ದಿಕ್ಕು ತಪ್ಪಿಸುವ ಕೆಲಸವನ್ನು ಇವರು ಮಾಡುತ್ತಿದ್ದಾರೆ. ಅಧ್ಯಕ್ಷರು ಸೇರಿದಂತೆ ಸರ್ವ ಸದಸ್ಯರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಕರ್ತಂಡ ಸೋಮಣ್ಣ ಇದ್ದರು.