ನಾಪೆÇೀಕ್ಲು, ಸೆ. 15: ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳ ಹೆಸರು ಬದಲಾಯಿಸಿ ತನ್ನದೆಂದು ಹೇಳಿಕೊಳ್ಳುವ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮೋದಿ ದುಡ್ಡಿನಲ್ಲಿ ಜಾತ್ರೆ ನಡೆಸುತ್ತಿದ್ದಾರೆ ಎಂದು ಕೊಡಗು -ಮೈಸೂರು ಲೋಕ ಸಭಾ ಸದಸ್ಯ ಪ್ರತಾಪ್ ಸಿಂಹ ಲೇವಡಿ ಮಾಡಿದರು.ಸ್ಥಳೀಯ ಕೊಡವ ಸಮಾಜದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಮಂತ್ರಿ ಉಜ್ವಲ್ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರಕಾರ 32 ರೂ. ನಲ್ಲಿ ಅಕ್ಕಿ ಖರೀದಿಸಿ 3 ರೂ.ಗಳಲ್ಲಿ ರಾಜ್ಯ ಸರಕಾರಕ್ಕೆ ನೀಡುತ್ತಿದೆ. ಅದರಲ್ಲಿ 2 ರೂ. ಕಡಿಮೆ ಮಾಡಿ ಒಂದು ರೂಪಾಯಿಯಲ್ಲಿ ಅಕ್ಕಿ ನೀಡುತ್ತಿದ್ದೇನೆ ಎನ್ನುತ್ತಾರೆ ಸಿದ್ದರಾಮಯ್ಯ. ಇದೇ ರೀತಿ ಕೇಂದ್ರ ಸರಕಾರದ ಎಲ್ಲಾ ಯೋಜನೆಗಳನ್ನು ಬಳಸಿಕೊಂಡು ತನ್ನದೆಂದು ಬಿಂಬಿಸಿ ಜನರನ್ನು ರಾಜ್ಯ ಸರಕಾರ ಮರಳು ಮಾಡುತ್ತಿದೆ ಎಂದು ದೂರಿದರು.

ಬಯಲು ಮುಕ್ತ ಶೌಚಾಲಯ ಮತ್ತು ಹೊಗೆ ಮುಕ್ತ ಭಾರತದ ಕನಸ್ಸು ಕಂಡ ಪ್ರಧಾನಿಗಳು ಸ್ವಚ್ಛ ಭಾರತ್ ಮಿಶನ್‍ನಡಿಯಲ್ಲಿ

(ಮೊದಲ ಪುಟದಿಂದ) ಪ್ರತೀ ಮನೆ, ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಕ್ರಮಕೈಗೊಂಡಿದ್ದಾರೆ. ಅಂತೆಯೇ ಹೊಗೆ ಮುಕ್ತ ಭಾರತಕ್ಕಾಗಿ ಬಡವರಿಗೆ ಉಚಿತ ಎಲ್.ಪಿ.ಜಿ ವಿತರಿಸಲು ಕ್ರಮಕೈಗೊಳ್ಳಲಾಗಿದೆ. ಕೊಡಗು ಜಿಲ್ಲೆಯಲ್ಲಿ ಉಚಿತ ಗ್ಯಾಸ್ ಪಡೆಯಲು 21 ಸಾವಿರ ಫಲಾನುಭವಿಗಳಿದ್ದಾರೆ. ಪ್ರಸ್ತುತ 200 ಜನರಿಗೆ ಗ್ಯಾಸ್ ವಿತರಿಸಲಾಗುತ್ತದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯ ಹೊಗೆ ಮುಕ್ತ ಭಾರತದ ಕನಸ್ಸು ನನಸಾಗುತ್ತಿದೆ. ಕೇಂದ್ರ ಸರಕಾರದ ಯೋಜನೆಗಳ ಪ್ರಯೋಜನವನ್ನು ಫಲಾನುಭವಿಗಳು ಪಡೆದುಕೊಳ್ಳಬೇಕು. ಚೀನಾ ದೇಶದ ಉತ್ಪನ್ನಗಳನ್ನು ನಿಷೇಧಿಸುವ ಮೂಲಕ ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದರು.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ನಾನು ಖಂಡಿಸುತ್ತೇನೆ. ಇದಕ್ಕೆ ರಾಜ್ಯ ಸರಕಾರದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವದೇ ಕಾರಣ. ತಮ್ಮ ತಪ್ಪನ್ನು ಮುಚ್ಚಿ ಹಾಕಲು ಬಿಜೆಪಿ, ಆರ್.ಎಸ್.ಎಸ್ ಮತ್ತು ಮೋದಿ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಮಡಿಕೇರಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಎಲ್.ಪಿ.ಜಿ ಸಂಸ್ಥೆಯ ನೋಡಲ್ ಅಧಿಕಾರಿ ರಮೇಶ್ ಮಾತನಾಡಿದರು.

ವೇದಿಕೆಯಲ್ಲಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಕೆ.ಎಸ್. ಹರೀಶ್ ಪೂವಯ್ಯ ಜಿ.ಪಂ.ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ, ನೆಲ್ಲಚಂಡ ಕಿರಣ್ ಕಾರ್ಯಪ್ಪ, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ, ಸದಸ್ಯರಾದ ಉಮಾಪ್ರಭು, ಇಂದಿರಾ ಹರೀಶ್, ಶಿವಚಾಳಿಯಂಡ ಜಗದೀಶ್ ಮತ್ತಿತರರು ಇದ್ದರು.