ಮಡಿಕೇರಿ, ಸೆ. 15: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ತಾ. 17 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ವಿಶ್ವ ಕರ್ಮ ಜಯಂತಿ ಉತ್ಸವ ನಡೆಯಲಿದೆ.

ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ನಡೆಯುವ ವಿಶ್ವ ಕರ್ಮ ಜಯಂತಿ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಸಂಸದರಾದ ಪ್ರತಾಪ್ ಸಿಂಹ, ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಎಸ್.ಜೆ. ದೇವದಾಸ್, ಸರಸ್ವತಿ ಡಿ.ಎಡ್ ಕಾಲೇಜಿನ ಪ್ರಾಂಶುಪಾಲ ಕುಮಾರ್, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಇತರರು ಪಾಲ್ಗೊಳ್ಳಲಿದ್ದಾರೆ.