ನಾಪೆÇೀಕ್ಲು, ಸೆ. 16: ನಾಪೆÉÇೀಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಮಬಂದಿ ಸಭೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನೋಡಲ್ ಅಧಿಕಾರಿ ದಮಯಂತಿ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಡೆಸಲಾದ ಕಾಮಗಾರಿಗಳ ವಿವರವನ್ನು ಸಭೆಗೆ ತಿಳಿಸಲಾಯಿತು. ಈ ಸಂದರ್ಭ ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ ಕೊಳಕೇರಿ ಗ್ರಾಮಸ್ಥ ಕುಂಡ್ಯೋಳಂಡ ಮೇದಪ್ಪ ಜಮಾಬಂದಿ ಸಭೆಗೂ ಮುಂಚೆ ತಮಗೆ ಕಾಮಗಾರಿಗಳ ಮಾಹಿತಿ ಇಲ್ಲ. ಸಭೆಯಲ್ಲಿ ಹಾಜರಿರುವವರಿಗೆ ಕಾಮಗಾರಿ ನಡೆದ ಪಟ್ಟಿಯ ಪ್ರತಿಯನ್ನು ನೀಡಬೇಕು ಎಂದು ಆಗ್ರಹಿಸಿದರು.

ಸಾಮಾಜಿಕ ಲೆಕ್ಕ ಪರಿಶೊಧಕ ವಿ.ಡಿ. ದಿನೇಶ್ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಈಗಾಗಲೇ ಪೂರ್ಣಗೊಂಡ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿ 2016 -17 ನೇ ಸಾಲಿನಲ್ಲಿ ಒಟ್ಟು 11 ಲಕ್ಷದ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಕಾಮಗಾರಿಗಳಿಗೆ ಅನುಮೋಧನೆ ನೀಡಲಾಯಿತು.

ಸಭೆಯಲ್ಲಿ ಹಾಜರಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್ ಗ್ರಾಮದ ಅಭಿವೃದ್ಧಿಗಾಗಿ ಸರಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗಿದೆ. ಕಾಮಗಾರಿಗೆ ಮಾತ್ರ ಬಿಲ್ ಪಡೆಯಲಾಗಿದೆ. ಇದನ್ನು ಯಾರು ಬೇಕಾದರೂ ಪರಿಶೀಲಿಸಬಹುದಾಗಿದೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ನೋಡೆಲ್ ಅಧಿಕಾರಿ ದಮಯಂತಿ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಾಳೆಯಂಡ ಸಾಬ ತಿಮ್ಮಯ್ಯ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಟಿ.ಆರ್. ಕೇಶವ್ ಇದ್ದರು.