ಸೋಮವಾರಪೇಟೆ, ಸೆ. 16: ಎಲ್ಲಾ ಸಮಸ್ಯೆಗಳಿಗೆ ಪರಿಹಾರವಿದ್ದು, ಮನುಷ್ಯ ಆತ್ಮಹತ್ಯೆಗೆ ಪ್ರಯತ್ನಿಸದಂತೆ ಇಲ್ಲಿನ ಜೆಎಂಎಫ್‍ಸಿಯ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ್ ಎಫ್. ದೊಡ್ಡಮನಿ ಕರೆ ನೀಡಿದರು.

ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರುಗಳ ಆಶ್ರಯದಲ್ಲಿ ತಾಕೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಪೋಷಕಾಂಶ ಆಹಾರ ಸಪ್ತಾಹ ಮತ್ತು ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ- ಕಾನೂನು ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೋಷಕಾಂಶಯುಕ್ತ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿಸುತ್ತದೆ. ಸೊಪ್ಪು, ತರಕಾರಿ, ಧಾನ್ಯಗಳು, ಹಣ್ಣುಗಳ ಸೇವನೆಯಿಂದ ಜ್ಞಾಪಕ ಶಕ್ತಿ ಹೆಚ್ಚುತ್ತದೆ. ಶುಚಿಯಾದ ಆಹಾರ ಪದಾರ್ಥಗಳನ್ನು ಎಲ್ಲರೂ ಉಪಯೋಗಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಜಿಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಸದಸ್ಯ ಬಿ.ಬಿ. ಸತೀಶ್, ಸಿಡಿಪಿಒ ಸಂಪತ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಚಂದ್ರಿಕಾ, ಲೀಲಾವತಿ, ಕಾವೇರಿ ಕಾರ್ಯಕ್ರಮ ನಿರ್ವಹಿಸಿದರು.