ಬೆಂಗಳೂರು, ಸೆ. 16: ಕರಾವಳಿಯ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತಾ. 17 ರಿಂದ 20 ರವರೆಗೆ ಮುಂದಿನ ನಾಲ್ಕು ದಿನ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕದ ಕಲಬುರ್ಗಿ, ರಾಯಚೂರು, ಬಾಗಲಕೋಟೆ ಸೇರಿದಂತೆ ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಶನಿವಾರ ಉತ್ತರಕನ್ನಡ ಮತ್ತು ಚಿತ್ರದುರ್ಗ ಜಿಲ್ಲೆಯ ಕೆಲವೆಡೆ ಮಳೆ ಬಿದ್ದಿದೆ. ಮುಂದಿನ ನಾಲ್ಕು ದಿನ ರಾಜ್ಯದ ಹಲವೆಡೆ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.