ಮಡಿಕೇರಿ, ಸೆ. 18: ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳ ಕರಗಗಳ ಪ್ರದಕ್ಷಿಣೆಗೆ ತಾ. 21 ರಂದು ಸಂಜೆ 5 ಗಂಟೆಗೆ ಮಹದೇವಪೇಟೆಯ ಪಂಪಿನಕೆರೆ ಬಳಿ ನಗರ ದಸರಾ ಸಮಿತಿ ವತಿಯಿಂದ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಚಾಲನೆ ನೀಡಲಾಗುತ್ತದೆ.