ಕೂಡಿಗೆ, ಸೆ. 18: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೂಡಿಗೆ ಹಾಗೂ ಸೋಮವಾರಪೇಟೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯುಕ್ತಾ ಆಶ್ರಯದಲ್ಲಿ ಕೂಡಿಗೆ ಡಯಟ್ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಸೋಮವಾರಪೇಟೆ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ- ಬಾಲಕಿಯರ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಭಿಮನ್ಯು ಕುಮಾರ್ ಮಾತನಾಡಿ, ಕ್ರೀಡಾಪಟುಗಳು ಸೋಲು-ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸಿ, ಕ್ರೀಡೆಗೆ ಗೌರವ ಸೂಚಿಸಬೇಕು. ಮುಂದಿನ ಕೂಡಿಗೆ, ಸೆ. 18: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೂಡಿಗೆ ಹಾಗೂ ಸೋಮವಾರಪೇಟೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯುಕ್ತಾ ಆಶ್ರಯದಲ್ಲಿ ಕೂಡಿಗೆ ಡಯಟ್ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಸೋಮವಾರಪೇಟೆ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ- ಬಾಲಕಿಯರ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಭಿಮನ್ಯು ಕುಮಾರ್ ಮಾತನಾಡಿ, ಕ್ರೀಡಾಪಟುಗಳು ಸೋಲು-ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸಿ, ಕ್ರೀಡೆಗೆ ಗೌರವ ಸೂಚಿಸಬೇಕು. ಮುಂದಿನ ಶಾಲೆಯ ಪೋಷಕ ಸಮಿತಿಯ ಅಧ್ಯಕ್ಷ ಗಂಗಾಧರ, ಡಯಟ್‍ನ ಉಪನ್ಯಾಸಕ ಮಲ್ಲೇಶ್‍ಸ್ವಾಮಿ, ಕೊಡಗು ದಲಿತ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಬಿ.ಡಿ. ಅಣ್ಣಯ್ಯ, ಸೋಮವಾರಪೇಟೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಎನ್. ಮಂಜುನಾಥ್, ಮೈಸೂರು ವಿಭಾಗಿಯ ಶಿಕ್ಷಕ ಸಂಘದ ನಿರ್ದೇಶಕ ಯೋಗೇಶ್, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಲಕ್ಷ್ಮಣ, ಕುಶಾಲನಗರ ಆರ್.ಎಂ.ಸಿ. ಮಾಜಿ ಅಧ್ಯಕ್ಷ ಎಂ.ಬಿ. ಜಯಂತ್ ಮತ್ತಿತರರು ಇದ್ದರು.

ಈ ಸಂದರ್ಭ ಕ್ರೀಡಾಕೂಟಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು.