ಮಡಿಕೇರಿ ಸೆ.19 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಯದ ಬಳಿ ನಿರ್ಮಿಸಲಾಗಿರುವ ಶ್ರೀ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ತಾ. 21 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ.

ಶ್ರೀ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ ಅಧ್ಯಕ್ಷ ಮಂಡೀರ ಸದಾ ಮುದ್ದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ.

ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ನೂತನ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಅತಿಥಿಗಳಾದ ಶಾಸಕ ಕೆ.ಜಿ. ಬೋಪಯ್ಯ, ಸಂಸದ ಪ್ರತಾಪ್‍ಸಿಂಹ, ಮಾಜಿ ಸಚಿವ ಟಿ. ಜಾನ್, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಉಪಾಧ್ಯಕ್ಷ ಟಿ.ಎಸ್. ಪ್ರಕಾಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷÀ ಚುಮ್ಮಿ ದೇವಯ್ಯ, ನಗರಸಭಾ ಸದಸ್ಯ ಪ್ರಕಾಶ್ ಆಚಾರ್ಯ, ಐಎನ್‍ಟಿಯುಸಿ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷÀ ಮಹೇಶ್ ಜೈನಿ, ದಸರಾ ದಶಮಂಟಪ ಸಮಿತಿ ಅಧ್ಯಕ್ಷÀ ಸತೀಶ್ ಧರ್ಮಪ್ಪ, ಉದ್ಯಮಿ ಪ್ರಸನ್ನ ಭಟ್ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ಅಂದು ಬೆಳಗ್ಗೆ 7.30 ಗಂಟೆಗೆ ಗಣಪತಿ ಹೋಮ, 9.30ಕ್ಕೆ ಕರಗ ದೇವತೆಗಳ ಆರಾಧನೆ ನೆರವೇರಲಿದೆ.

ಸುಮಾರು ರೂ. 50 ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಶ್ರೀ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ.