ನಾಪೆÇೀಕ್ಲು, ಸೆ. 19: ಬೆಳೆಯ ಸಿರಿ ಮೊಳಕೆಯಲ್ಲಿ ಎಂಬಂತೆ ಆರೋಗ್ಯವಂತ ಮಕ್ಕಳಿಂದ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅಭಿಪ್ರಾಯಪಟ್ಟರು.

ಕೊಳಕೇರಿ ಗ್ರಾಮದ ತೊತ್ಯಾನ ಪರಿಕೆಯಲ್ಲಿ 7.97 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮನೆಯ ವಾತಾವರಣದೊಂದಿಗೆ ಪೌಷ್ಟಿಕ ಆಹಾರಗಳನ್ನು ನೀಡಿ ಮಕ್ಕಳ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆಗೆ ಸರಕಾರ ಅಂಗನವಾಡಿ ಕೇಂದ್ರಗಳಲ್ಲಿ ವ್ಯವಸ್ಥೆ ಕಲ್ಪಿಸಿದೆ. ಇದಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಮುತುವರ್ಜಿಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಎಲ್ಲರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಮಡಿಕೇರಿ ತಾಲೂಕಿನಲ್ಲಿ 250 ಅಂಗನವಾಡಿ ಕೇಂದ್ರಗಳಿದ್ದು, 201 ಕೇಂದ್ರಗಳು ಸ್ವಂತ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಉಳಿದ 49 ಕಟ್ಟಡಗಳನ್ನು ಬಾಡಿಗೆ ರೂಪದಲ್ಲಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನು ಸ್ವಂತ ಕಟ್ಟಡಗಳಾಗಿ ಪರಿವರ್ತಿಸಲಾಗುವದು ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಮಾತನಾಡಿ ಈ ಅಂಗನವಾಡಿ ಕಟ್ಟಡಕ್ಕೆ ಸ್ಥಳೀಯರಾದ ಮಾಳೆಯಂಡ ಸಾಬು ಭೀಮಯ್ಯ ಸ್ಥಳ ನೀಡಿರುವದು ಶ್ಲಾಘನೀಯ. ಸ್ಥಳದಾನಿಗಳನ್ನು ನೆನಪಿಸಿಕೊಳ್ಳುವ ಅಗತ್ಯ ಮುಖ್ಯವಾಗಿದೆ. ಇಲ್ಲವಾದರೆ ದಾನಿಗಳ ಕೊರತೆ ಎದುರಾಗಬಹುದು. ಸ್ಥಳದಾನಿಗಳ ನಾಮಫಲವನ್ನು ಕಡ್ಡಾಯವಾಗಿ ಕಟ್ಟಡದಲ್ಲಿ ಅಳವಡಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಸದಸ್ಯೆ ಉಮಾಪ್ರಭು, ನಾಪೆÇೀಕ್ಲು ಗ್ರಾಮ ಪಂಚಾಯಿತಿ ಸದಸ್ಯೆ ಆಮಿನಾ, ಎ.ಪಿ.ಎಂ.ಸಿ ನಿರ್ದೇಶಕ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಕುಂಡ್ಯೋಳಂಡ ರಮೇಶ್ ಮುದ್ದಯ್ಯ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ ಮಾತನಾಡಿದರು.

ಈ ಸಂದರ್ಭದಲ್ಲಿ ತಮ್ಮ ಮಾತಾ ಪಿತೃಗಳಾದ ದಿ. ಮಂದಪ್ಪ ಮತ್ತು ಪೆÇನ್ನಪ್ಪ ಅವರ ಜ್ಞಾಪಕಾರ್ಥವಾಗಿ ಅಂಗನವಾಡಿ ಕಟ್ಟಡಕ್ಕೆ ಮೂರು ಸೆಂಟು ಸ್ಥಳ ದಾನ ನೀಡಿದ ಮಾಳೆಯಂಡ ಸಾಬು ಭೀಮಯ್ಯ ಮತ್ತು ಸುಜಾತ ದಂಪತಿಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಸಮಾಜ ಕಲ್ಯಾಣ ಅಧಿಕಾರಿ ದಮಯಂತಿ, ನಾಪೆÇೀಕ್ಲು ಗ್ರಾಮ ಪಂಚಾಯಿತಿ ಸದಸ್ಯೆ ಚಿತ್ರಾ, ಅಪ್ಪಾರಂಡ ಸುಧೀರ್ ಅಯ್ಯಪ್ಪ, ಚೆಪ್ಪೆಂಡಡಿ ಭೂತ್ ಮಟ್ಟದ ಅಧಿಕಾರಿ ಪಿ.ಎಂ. ಅಹಮ್ಮದ್, ಕುಂಡ್ಯೋಳಂಡ ವಿಶು ಪೂವಯ್ಯ, ಮುತ್ತಣ್ಣ, ಪಾಡಿಯಮ್ಮಂಡ ಮನು ಮಹೇಶ್, ಕನ್ನಂಬಿರ ಸುಧಿ ತಿಮ್ಮಯ್ಯ, ಬೊಟ್ಟೋಳಂಡ ರಮೇಶ್ ಇದ್ದರು.