ಮಡಿಕೇರಿ ಸೆ.20 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕೋಟೆ ಮಾರಿಯಮ್ಮ ದೇವಾಯದ ಬಳಿ ನಿರ್ಮಿಸಲಾಗಿರುವ ಶ್ರೀ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ತಾ. 21 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ.

ಶ್ರೀ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ ಅಧ್ಯಕ್ಷ ಮಂಡೀರ ಸದಾ ಮುದ್ದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ ಅನ್ನದಾನ ನಡೆಯಲಿದೆ.