ಗೋಣಿಕೊಪ್ಪಲು, ಸೆ.20: ಇಲ್ಲಿನ ಶ್ರೀ ಕಾವೇರಿ ದಸರಾ ಸಮಿತಿ ಆಶ್ರಯದಲ್ಲಿ 39ನೇ ವರ್ಷದ ದಸರಾ ಮಹೋತ್ಸವ ಇಂದಿನಿಂದ( ತಾ.21) ಶ್ರೀ ಚಾಮುಂಡೇಶ್ವರಿ ದೇವಿಯ ಪ್ರತಿಷ್ಠಾಪನೆಯೊಂದಿಗೆ ವಿದ್ಯುಕ್ತವಾಗಿ ಆರಂಭಗೊಳ್ಳಲಿದೆ.

ಗುರುವಾರ ಬೆಳಿಗ್ಗೆ 6.30 ಗಂಟೆಯಿಂದಲೇ ಮಹಾಗಣಪತಿ ಹೋಮದೊಂದಿಗೆ ಪೂಜಾ ವಿಧಿ ವಿದಾನಗಳು ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದ ವಿಶೇಷ ರಂಗಮಂಟಪದಲ್ಲಿ ನೆರವೇರಲಿದೆ.

ಬೆಳಿಗ್ಗೆ 8.05 ಗಂಟೆಗೆ ತುಲಾ ಲಗ್ನದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಪ್ರತಿಷ್ಠಾಪನೆ

ನಡೆಯಲಿದೆ. ಗೋಣಿಕೊಪ್ಪಲಿನ ಕಾಮತ್ ಗ್ರೂಪ್ಸ್ ವಿಗ್ರಹ ದಾನಿಗಳಾಗಿದ್ದು, ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಪೆÇನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮದ ಮುಖ್ಯಸ್ಥರಾದ ಸ್ವಾಮಿ ಬೋಧ ಸ್ವರೂಪಾನಂದ ಮಹಾರಾಜ್ ಆಶೀರ್ವಚನ ನೀಡಲಿದ್ದಾರೆ.

ಶ್ರೀ ಕಾವೇರಿ ದಸರಾ ಸಮಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯ ಕ್ರಮದಲ್ಲಿ ಮುಖ್ಯ ಅತ್ತಿಥಿಗಳಾಗಿ ದಸರಾ ಸಮಿತಿ ಗೌರವಾಧ್ಯಕ್ಷರೂ ಆಗಿರುವ ಶಾಸಕ ಕೆ.ಜಿ. ಬೋಪಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ಚೆಪ್ಪುಡಿರ ಅರುಣ್‍ಮಾಚಯ್ಯ, ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ, ತಾ.ಪಂ. ಸದಸ್ಯ ಜಯಾಪೂವಯ್ಯ, ಗ್ರಾ.ಪಂ. ಅಧ್ಯಕ್ಷೆ ಎಂ.ಸೆಲ್ವಿ, ದಶಮಂಟಪಗಳ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾ.ಪಂ. ಜನಪ್ರತಿನಿಧಿಗಳು ಹಾಗೂ ಗಣ್ಯರು ಪಾಲ್ಗೊಳ್ಳಲಿರುವದಾಗಿ ಸಮಿತಿಯ ಕಾರ್ಯಾಧ್ಯಕ್ಷ ಬಿ.ಎನ್. ಪ್ರಕಾಶ್ ತಿಳಿಸಿದ್ದಾರೆ.