ಮಡಿಕೇರಿ, ಸೆ. 20: ‘ಪ್ರಜಾಸತ್ಯ’ ದಿನ ಪತ್ರಿಕೆಯ ದ್ವಿತೀಯ ವಾರ್ಷಿಕೋತ್ಸವವನ್ನು ತಾ. 22 ರಂದು ಪೂರ್ವಾಹ್ನ 10 ಗಂಟೆಗೆ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಆಯೋಜಿಸ ಲಾಗಿದೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಪತ್ರಿಕೆಯ ಸಂಪಾದಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ|| ಬಿ.ಸಿ ನವೀನ್ ಕುಮಾರ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಜಿ. ಬೋಪಯ್ಯ, ಚಾಮರಾಜ ವಿಧಾನಸಭಾ ಕ್ಷೇತ್ರ ಶಾಸಕ ಮತ್ತು ಪತ್ರಿಕೋದ್ಯಮಿ ವಾಸು, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವಿಧಾನಪರಿಷತ್ ಸದಸ್ಯರಾದ ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ವಾರ್ತಾಧಿಕಾರಿ ಚಿನ್ನಸ್ವಾಮಿ ಆಗಮಿಸಲಿದ್ದಾರೆ.

ಮುಖ್ಯ ಭಾಷಣಕಾರರಾಗಿ ವಿಜಯವಾಣಿ, ಮೈಸೂರು ಬ್ಯೂರೋ ಮುಖ್ಯಸ್ಥ ಸಿ.ಕೆ. ಮಹೇಂದ್ರ, ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ‘ಜನಮಿತ್ರ’ ಪತ್ರಿಕೆಯ ಪ್ರದಾನ ಸಂಪಾದಕ ಹೆಚ್.ಬಿ. ಮದನ್‍ಗೌಡ, ‘ಶಕ್ತಿ’ ದಿನಪತ್ರಿಕೆಯ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ‘ಕಾವೇರಿ ಟೈಮ್’್ಸ ದಿನಪತ್ರಿಕೆಯ ಸಂಪಾದಕ ಬಿ.ಸಿ. ನಂಜಪ್ಪ, ಹಾಸನ ‘ಜನಮಿತ್ರ’ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಸಿ.ಆರ್. ನವೀನ್ ಆಗಮಿಸಲಿದ್ದಾರೆ.

ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರನ್ನು ಸನ್ಮಾನಿಸಲಾಗುವದು. ಆರೋಗ್ಯ ಕ್ಷೇತ್ರದಲ್ಲಿ ಡಾ.ಮನೋಹರ್ ಜಿ. ಪಾಟ್ಕರ್, ಸಾಹಿತ್ಯ ಕ್ಷೇತ್ರದಲ್ಲಿ ಬಿ.ಎ. ಷಂಶುದ್ದೀನ್, ಜನಪದ ಕ್ಷೇತ್ರದಲ್ಲಿ ಬಾಚರಣಿಯಂಡ ಪಿ. ಅಪ್ಪಣ್ಣ, ಪರಿಸರ ಕ್ಷೇತ್ರದಲ್ಲಿ ಡಾ. ಎಸ್.ವಿ. ನರಸಿಂಹನ್, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸುನಿಲ್ ಪೊನ್ನೇಟಿ, ಕ್ರೀಡಾ ಕ್ಷೇತ್ರದಲ್ಲಿ ಪಿ.ಇ.ನಂದ, ಶಿಕ್ಷಣ ಕ್ಷೇತ್ರದಲ್ಲಿ ಕೆ.ಎ ರಾಮಚಂದ್ರ, ತೋಟಗಾರಿಕಾ ಕ್ಷೇತ್ರದಲ್ಲಿ ಪೊನ್ನಚೆಟ್ಟೀರ ಸುರೇಶ್ ಸುಬ್ಬಯ್ಯ, ಕೃಷಿ ಕ್ಷೇತ್ರದಲ್ಲಿ ಮಂದ್ರೀರ ತೇಜಸ್ ನಾಣಯ್ಯ, ಸಮಾಜ ಸೇವಾ ಕ್ಷೇತ್ರದಲ್ಲಿ ಮುರುಗೇಶ್, ಎಂ.ಎಚ್. ಮಹಮದ್ ಮುಸ್ತಫ, ತನಲ್ ಸಂಸ್ಥೆ ಹಾಗೂ ಸುಗಮ ಸಂಗೀತ ಕ್ಷೇತ್ರದಲ್ಲಿ ಪೊನ್ನಂಪೇಟೆಯ ನಿನಾದ ಸಂಗೀತ ಸಂಸ್ಥೆಯ ಮುಖ್ಯಸ್ಥೆ ಚೇಂದಿರ ನಿರ್ಮಲ ಬೋಪಣ್ಣರನ್ನು ಸನ್ಮಾನಿಸಲಾಗುವದು ಎಂದು ‘ಪ್ರಜಾಸತ್ಯ’ದ ಪತ್ರಿಕಾ ಹೇಳಿಕೆ ತಿಳಿಸಿದೆ.