ಮಡಿಕೇರಿ, ಸೆ. 20: ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ತಾ. 23 ರಂದು ಬೆಳಿಗ್ಗೆ 6.30 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮ್ಯಾರಥಾನ್ ಓಟಕ್ಕೆ ಮಡಿಕೇರಿ ಡಿವೈಎಸ್‍ಪಿ ಸುಂದರ್‍ರಾಜ್ ಚಾಲನೆ ನೀಡಲಿದ್ದಾರೆ.

ತಾ. 24 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ಎಂ.ಪಿ. ಸುನಿಲ್ ಸುಬ್ರಮಣಿ, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಅಪರ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್, ಆಯುಕ್ತೆ ಶುಭಾ, ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷ ಮಹೇಶ್ ಜೈನಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀಬಾಯಿ ಹಾಗೂ ನಗರ ದಸರಾ ಸಮಿತಿಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ತಾ. 26 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಶಾಸಕ ಅಪ್ಪಚ್ಚು ರಂಜನ್ ಕಬಡ್ಡಿ ಪಂದ್ಯಾಟವನ್ನು ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್, ಶಾಸಕಿ ವೀಣಾ ಅಚ್ಚಯ್ಯ, ನಗರಸಭೆ ಉಪಾಧ್ಯಕ್ಷ ಟಿ.ಎನ್. ಪ್ರಕಾಶ್, ಇತರರು ಪಾಲ್ಗೊಳ್ಳಲಿದ್ದಾರೆ ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಬಿ.ಕೆ. ಜಗದೀಶ್ ತಿಳಿಸಿದ್ದಾರೆ.