ಮಡಿಕೇರಿ: ಕಡಗದಾಳುವಿನ ಇಬ್ನಿವಳವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತಾ. 24 ರಂದು ಪೂರ್ವಾಹ್ನ 11 ಗಂಟೆಗೆ ಕಡಗದಾಳು ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸಂಘದ ಅಧ್ಯಕ್ಷ ಕೆಚ್ಚೆಟ್ಟೀರ ಬಿ. ಬಿದ್ದಯ್ಯ ಅಧ್ಯಕ್ಷತೆಯಲ್ಲಿ ಜರುಗಲಿರುವದಾಗಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಪಿ. ಲೋಕೇಶ್ ತಿಳಿಸಿದ್ದಾರೆ.

ನೆಲ್ಲಿಹುದಿಕೇರಿ: ತಾ. 23 ರಂದು ಪೂರ್ವಾಹ್ನ 11 ಗಂಟೆಗೆ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ ಅಧ್ಯಕ್ಷತೆಯಲ್ಲಿ ಗ್ರಾಮ ಸಭೆಯನ್ನು ಏರ್ಪಡಿಸಲಾಗಿದೆ.

ಆಹ್ವಾನಿತರಾಗಿ ಜಿ.ಪಂ ಸದಸ್ಯೆ ಸುನಿತಾ ಮಂಜುನಾಥ್, ತಾ.ಪಂ. ಸದಸ್ಯೆ ಸುಹಾದ ಅಶ್ರಫ್, ನೋಡಲ್ ಅಧಿಕಾರಿ ಬಿ.ಸಿ. ಚಿಟ್ಟಿಯಪ್ಪ ಪಾಲ್ಗೊಳ್ಳಲಿದ್ದಾರೆ.

ಬೆಟ್ಟಗೇರಿ: ಬೆಟ್ಟಗೇರಿ ಗ್ರಾಮ ಪಂಚಾಯಿತಿ 2016-17ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ತಾ. 27 ರಂದು ಪೂರ್ವಾಹ್ನ 10.30 ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್. ಶಾಂತಿ ಅಧ್ಯಕ್ಷತೆಯಲ್ಲಿ ಬೆಟ್ಟಗೇರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.

ಮಡಿಕೇರಿ: ಮಡಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತಾ. 22 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಬಾಲಭವನ ಸಭಾಂಗಣದಲ್ಲಿ ನಡೆಯಲಿದೆ.

ಹುದಿಕೇರಿ: ತಾ. 25 ರಂದು ಪೂರ್ವಾಹ್ನ 11 ಗಂಟೆಗೆ ಹುದಿಕೇರಿ ಗ್ರಾಮ ಪಂಚಾಯಿತಿಯ 2016-17ನೇ ಸಾಲಿನ ಜಮಾಬಂದಿ ಸಭೆ ಪಂಚಾಯಿತಿ ಅಧ್ಯಕ್ಷೆ ಮತ್ರಂಡ ರೇಖಾ ಪೊನ್ನಪ್ಪ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಕಚೇರಿಯಲ್ಲಿ ನಡೆಯಲಿದೆ.

ಕೆದಮುಳ್ಳೂರು: ಕೆದಮುಳ್ಳೂರು ಗ್ರಾಮ ಪಂಚಾಯಿತಿಯ ಜಮಾಬಂದಿ ಸಭೆ ತಾ. 25 ರಂದು ಕೆ.ಆರ್. ರೋಹಿಣಿ ಅಧ್ಯಕ್ಷತೆಯಲ್ಲಿ ಕೆದಮುಳ್ಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ.

*ವೀರಾಜಪೇಟೆ: ಅಮ್ಮತ್ತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2016-17ನೇ ಸಾಲಿನಲ್ಲಿ ರೂ. 30.63 ಲಕ್ಷ ಲಾಭ ಬಂದಿದೆ ಎಂದು ಸಂಘದ ಅಧ್ಯಕ್ಷ ಮೂಕೊಂಡ ಸಿ. ಅಯ್ಯಪ್ಪ ಹೇಳಿದರು.

ಸಂಘ ಕಳೆದ 12 ವರ್ಷಗಳಿಂದ ಸತತವಾಗಿ ಲಾಭಗಳಿಸುತ್ತಿದ್ದು, ಸದಸ್ಯರಿಗೆ ಉತ್ತಮ ಸೇವೆ ಸಲ್ಲಿಸುತ್ತಾ ಬಂದಿದೆ. ಪ್ರಸಕ್ತ ವರ್ಷ ಶೇ. 17 ರಷ್ಟು ಡಿವಿಡೆಂಡ್ ಪಾವತಿಸಲು ತೀರ್ಮಾನಿಸಲಾಗಿದೆ. ಸಂಘ ರೂ. 98.02 ಲಕ್ಷ ಕ್ಷೇಮನಿಧಿ ರೂ. 88.63 ಲಕ್ಷ ಹಾಗೂ ಇತರ ನಿಧಿಗಳು ರೂ. 86.57 ಲಕ್ಷ ಇದೆ ಎಂದು ತಿಳಿಸಿದರು. ಮಾ. 31 ಕ್ಕೆ 2428 ಸದಸ್ಯರನ್ನು ಹೊಂದಿದ್ದು, ಪಾಲು ಬಂಡವಾಳ 2016-17ನೇ ಸಾಲಿನಲ್ಲಿ ವಿವಿಧ ಮೂಲಗಳಿಂದ ರೂ. 1721.34 ಲಕ್ಷ ಸಂಗ್ರಹಗೊಂಡಿದ್ದು, ಇದರಲ್ಲಿ ರೂ. 1696.18 ಲಕ್ಷ ಸಾಲ ನೀಡಲಾಗಿದೆ. ಒಟ್ಟು ವಹಿವಾಟು ರೂ. 10219.61 ಲಕ್ಷ ಆಗಿದೆ ಎಂದರು.

ಸಂಘದ ಮಹಾಸಭೆ ತಾ. 23 ರಂದು ಬೆಳಿಗ್ಗೆ 10.30 ಗಂಟೆಗೆ ಸಂಘದ ಸಭಾಂಗಣದಲ್ಲಿ ನಡೆಯಲಿದ್ದು, ಸದಸ್ಯರು ಸಲಹೆ ಸೂಚನೆಗಳನ್ನು ನೀಡುವಂತೆ ತಿಳಿಸಿದ್ದಾರೆ.