ಮಡಿಕೇರಿ, ಸೆ. 24: ಕೊಡಗು ಜಿಲ್ಲೆಯಲ್ಲಿ ವಾಣಿಜ್ಯ ಮಳಿಗೆಗಳು ಹಾಗೂ ಹೊಟೇಲ್, ರೆಸಾರ್ಟ್‍ಗಳಲ್ಲಿ ಇಂಗ್ಲೀಷ್ ನಾಮಫಲಕಗಳು ರಾರಾಜಿಸುತ್ತಿದ್ದು, ಕನ್ನಡದ ಕಡೆಗಣನೆಯ ಬಗ್ಗೆ ಜಿಲ್ಲಾಡಳಿತದ ಗಮನ ಸೆಳೆÉದಿದ್ದರು ಅಧಿಕಾರಿಗಳು ಇಲ್ಲಿಯವರೆಗೆ ಯಾವದೇ ಕ್ರಮ ಕೈಗೊಂಡಿಲ್ಲವೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷÀ ಲೋಕೇಶ್ ಸಾಗರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆÀದ ಒಂದೂವರೆ ವರ್ಷಗಳಿಂದ ಕನ್ನಡದ ನಾಮಫಲಕಕ್ಕಾಗಿ ಅಧಿಕಾರಿಗಳ ಗಮನ ಸೆಳೆಯುತ್ತಲೆ ಬರಲಾಗುತ್ತಿದೆ. ಅಲ್ಲದೆ, ಜಿಲ್ಲಾ ಪಂಚಾಯಿತಿ ಸಭೆಗಳಲ್ಲಿ ಕೂಡ ಗ್ರಾಮ ಪಂಚಾಯಿತಿಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿಕೊಳ್ಳ ಲಾಗಿತ್ತು. ಆದರೆ, ಇಲ್ಲಿಯವರೆಗೆ ಪಂಚಾಯಿತಿ ಪಿಡಿಒಗಳು ಯಾವದೇ ಕ್ರಮ ಕೈಗೊಂಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಹೆದ್ದಾರಿಗಳಲ್ಲಿರುವ ವಾಣಿಜ್ಯ ಮಳಿಗೆಗಳಲ್ಲೆ ಇಂಗ್ಲೀಷ್ ರಾರಾಜಿಸುತ್ತಿದ್ದರು ಯಾವದೇ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರದ ಕನ್ನಡ ಕಡ್ಡಾಯದ ಆದೇಶವನ್ನು ಕಡೆಗಣಿಸಲಾಗುತ್ತಿದ್ದು, ಅಧಿಕಾರಿಗಳಿಗೂ ಇದರ ಬಗ್ಗೆ ಕಾಳಜಿ ಇಲ್ಲದಾಗಿದೆ ಎಂದರು.
ಅ. 2 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವದು. ಇದಕ್ಕೂ ಜಿಲ್ಲಾಡಳಿತ ಸ್ಪಂದಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸ ಲಾಗುವದೆಂದು ಹೇಳಿದರು.
ಊರುಗಳ ಹೆಸರುಗಳ ನಾಮಫಲಕದಲ್ಲಿ ಕೂಡ ತಪ್ಪು ತಪ್ಪಾಗಿ ಹೆಸರನ್ನು ನಮೂದಿಸಲಾಗುತ್ತಿದ್ದು, ಇದರ ಬಗ್ಗೆಯೂ ಅಧಿಕಾರಿಗಳು ಗಮನ ಹರಿಸಬೇಕು. ನಾಮ ಫಲಕಗಳಿಗೆ ಮಸಿ ಬಳಿಯುವ ಕಾರ್ಯಕ್ಕೆ ಇಲ್ಲಿಯವರೆಗೆ ಕೈಹಾಕದ ಕೊಡಗು ಕಸಾಪ ಇನ್ನು ಮುಂದಿನ ದಿನಗಳಲ್ಲಿ ಹೋರಾಟದ ಸ್ವರೂಪವನ್ನು ಬದಲಾಯಿಸಲಿದೆ. ಮುಂದೆ ಆಗುವ ಅನಾಹುತಗಳಿಗೆ ಜಿಲ್ಲಾಡಳಿತವೆ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಡಿಕೆÉೀರಿ ತಾಲೂಕು ಕಸಾಪ ಅಧ್ಯಕ್ಷ ಕುಡೆಕಲ್ ಸಂತೋಷ್ ಹಾಗೂ ಕಾರ್ಯದರ್ಶಿ ಕೆ.ಎಸ್. ರಮೇಶ್ ಉಪಸ್ಥಿತರಿದ್ದರು.