ಮಡಿಕೇರಿ, ಸೆ. 26:ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ಮಡಿಕೇರಿ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ತಾ. 27 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಮೈಸೂರು ರಸ್ತೆಯಲ್ಲಿರುವ ಕ್ರಿಸ್ಟಲ್ ಹಾಲ್‍ನಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಯೋಜನೆ ಮತ್ತು ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ, ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸಿ. ಜಗನ್ನಾಥ್ ತಿಳಿಸಿದ್ದಾರೆ.

ಛಾಯಾಚಿತ್ರ ಪ್ರದರ್ಶನ

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಬೆಳಿಗ್ಗೆ 10 ಗಂಟೆಗೆ ಛಾಯಾಚಿತ್ರ ಪ್ರದರ್ಶನ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯಲಿದೆ.

ಛಾಯಾಚಿತ್ರ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಚಾಲನೆ ನೀಡಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮಮ್ತಾಜ್ ಭಾಗವಹಿಸಲಿದ್ದಾರೆ.