ಮಡಿಕೇರಿ, ಸೆ. 26: ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ವತಿಯಿಂದ ಉದ್ಯೋಗ ಮೇಳ ಇತ್ತೀಚೆಗೆ ಜರುಗಿತು. ಉದ್ಯೋಗ ಮೇಳದಲ್ಲಿ ಸುಮಾರು 179 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದರು. ಇವರಲ್ಲಿ 43 ಮಂದಿ ತಾತ್ಕಾಲಿಕವಾಗಿ ಆಯ್ಕೆಯಾದರು.
ಉದ್ಯೋಗ ಮೇಳದಲ್ಲಿ ಮಹೀಂದ್ರಾ ಹಾಲಿಡೇ ಅಂಡ್ ರೆಸಾರ್ಟ್, ಇಬ್ಬನಿ ರೇಸಾರ್ಟ್, ವುಡ್‍ಲ್ಯಾಂಡ್ಸ್, ಫ್ರೆಂಡ್ಲಿ ಮೋಟಾರ್ಸ್ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಂಡವು.
ಎಸ್.ಎಸ್.ಎಲ್.ಸಿ, ಪಿ.ಯು.ಸಿ. ಹಾಗೂ ಯಾವದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಿದ್ದರು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ. ಜಗನ್ನಾಥ ತಿಳಿಸಿದ್ದಾರೆ.