ಸಿದ್ದಾಪುರ, ಸೆ. 25: ಮುಂದಿನ ಚುನಾವಣೆಯಲ್ಲಿ ಜೆ.ಡಿ.ಎಸ್. ಅಧಿಕಾರಕ್ಕೆ ಬರುವ ಮೂಲಕ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಲಿದ್ದಾರೆ ಎಂದು ಜೆ.ಡಿ.ಎಸ್. ಮುಖಂಡ ಬಿ.ಎ. ಜೀವಿಜಯ ಹೇಳಿದರು. ನೆಲ್ಯಹುದಿಕೇರಿ ಗ್ರಾಮದಲ್ಲಿ ಜೆ.ಡಿ.ಎಸ್. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ರೈತರು ಸೇರಿದಂತೆ ಬಡವರ ಅಭಿವೃದ್ಧಿಗೆ ಸಹಕಾರ ನೀಡಿದ್ದರು. ಮುಂದಿನ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವು ನಿರ್ಣಾಯಕ ಪಾತ್ರ ವಹಿಸಲಿದ್ದು, ಜೆ.ಡಿ.ಎಸ್. ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.
ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮತೀನ್ ಮಾತನಾಡಿ, ಜೀವಿಜಯ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತ್ಯಲ್ಪ ಮತದಿಂದ ಪರಾಭವಗೊಂಡಿದ್ದರು. ಅದರೇ ಈ ಬಾರಿ ಕ್ಷೇತ್ರದಲ್ಲಿ ಜೆ.ಡಿ.ಎಸ್. ಬಗ್ಗೆ ಹೆಚ್ಚಿನ ಒಲವು ಇದ್ದು, ಅವರು ಶಾಸಕರಾಗುವದು ಖಚಿತ ಎಂದು ಹೇಳಿದರು.
ಈ ಸಂದರ್ಭ ಜಿಲ್ಲಾ ಯುವ ಜನತದಳ ಅಧ್ಯಕ್ಷ ಸಿ.ಎಲ್. ವಿಶ್ವ, ಐಗೂರು ಗ್ರಾ.ಪಂ. ಅಧ್ಯಕ್ಷ ಚಂಗಪ್ಪ ಮಾಸ್ಟರ್, ಚೆಟ್ಟಳ್ಳಿ ಗ್ರಾ.ಪಂ. ಸದಸ್ಯ ಡೆನ್ನಿ ಮೊರೂಸ್, ಮುಳ್ಳುಸೋಗೆಯ ರಾಜೇಶ್, ಜಿಲ್ಲಾ ಸಮಿತಿಯ ಪದಾಧಿಕಾರಿಗಳಾದ ಜಯಕುಮಾರ್, ಶಿವದಾಸ್, ಸ್ಥಳೀಯ ಸ್ಥಾನೀಯ ಸಮಿತಿ ಅಧ್ಯಕ್ಷ ಕೆ.ಈ ರಮೇಶ್ (ಲಿಂಗು) ಇನ್ನಿತರರು ಹಾಜರಿದ್ದರು. ಇದೇ ಸಂದರ್ಭ ನೆಲ್ಯಹುದಿಕೇರಿ ಸ್ಥಾನೀಯ ಸಮಿತಿಯ ಪದಾಧಿಕಾರಿಗಳನ್ನು ಅಯ್ಕೆ ಗೊಳಿಸಲಾಯಿತು. ಬಿ.ಜೆ.ಪಿ. ಕಾರ್ಯಕರ್ತ ಶಿವದಾಸ್ ಜೆ.ಡಿ.ಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.