ಕುಶಾಲನಗರ, ಸೆ. 26: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ನಗರ ಬಿಜೆಪಿ ಘಟಕದ ಆಶ್ರಯದಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಹಣ್ಣು-ಹಂಪಲು ವಿತರಿಸಲಾಯಿತು.
ನಗರಾಧ್ಯಕ್ಷ ಕೆ.ಜಿ. ಮನು ನೇತೃತ್ವದಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿದರು. ಈ ಸಂದರ್ಭ ಕುಶಾಲನಗರ ಪಟ್ಟಣ ಪಂಚಾಯಿತಿ ಸದಸ್ಯ ಹೆಚ್.ಎಂ. ಮಧುಸೂದನ್, ನಗರ ಘಟಕ ಉಪಾಧ್ಯಕ್ಷ ಮಂಡೇಪಂಡ ಬೋಸ್ ಮೊಣ್ಣಪ್ಪ, ಕಾರ್ಯದರ್ಶಿ ಶಿವಾಜಿರಾವ್, ಯುವ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ, ನಗರ ಕಾರ್ಯದರ್ಶಿ ನಿಡ್ಯಮಲೆ ದಿನೇಶ್, ಪ್ರಮುಖರಾದ ವಿ.ಎನ್. ವಸಂತಕುಮಾರ್, ಜಿ.ಎಲ್. ನಾಗರಾಜ್, ಹೆಚ್.ಎನ್. ರಾಮಚಂದ್ರ, ಪಿ.ಪಿ. ಸತ್ಯನಾರಾಯಣ, ಕೆ. ವರದ, ಶಿವರಾಜ್, ವೈಶಾಖ್, ಪ್ರವೀಣ್ ಮತ್ತಿತರರು ಇದ್ದರು.