ಮಡಿಕೇರಿ, ಸೆ. 27: ಮಡಿಕೇರಿ ದಸರಾ ಉತ್ಸವದ ಸಾಂಸ್ಕøತಿಕ ಕಾರ್ಯಕ್ರಮದ ಮತ್ತೊಂದು ಆಕರ್ಷಣೆಯಾಗಿರುವ ಯುವ ದಸರಾ ಕಾರ್ಯಕ್ರಮ ತಾ. 28 ರಂದು (ಇಂದು) 3ಡಿ ಟೀಂ ತಂಡದ ವತಿಯಿಂದ ಗಾಂಧಿ ಮೈದಾನದಲ್ಲಿನ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿದೆ.
ಸಂಜೆ 7 ಗಂಟೆಗೆ ಆರಂಭಗೊಳ್ಳುವ ಯುವ ದಸರಾವನ್ನು ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಉದ್ಘಾಟಿಸುವರು. ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ಕೆ.ಜಿ. ಬೋಪಯ್ಯ, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ರೇಷ್ಮೆ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್, ಅರಣ್ಯ ಅಭಿವೃದ್ಧಿ ನಿಗಮ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ನಗರಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಉಪಾಧ್ಯಕ್ಷ ಟಿ.ಎಸ್. ಪ್ರಕಾಶ್, ಮೂಡಾ ಅಧ್ಯಕ್ಷ ಚುಮ್ಮಿ ದೇವಯ್ಯ, ದಸರಾ ಸಮಿತಿ ಕಾರ್ಯಾಧ್ಯಕ್ಷ ಮಹೇಶ್ ಜೈನಿ, ನಗರಸಭೆ ಮಾಜಿ ಅಧ್ಯಕ್ಷ ಪಿ.ಡಿ. ಪೊನ್ನಪ್ಪ, ದಸರಾ ಸಮಿತಿ ಖಜಾಂಚಿ ಸಂಗೀತ ಪ್ರಸನ್ನ, ಉದ್ಯಮಿ ನಾಪಂಡ ಮುತ್ತಪ್ಪ, ಕೆ.ಎಸ್. ದೇವ ಪ್ರಸಾದ್ ಉಪಸ್ಥಿತರಿರುವರು.
ಆಕರ್ಷಣೆ: ತಾಂಡವ ಕಲಾ ತಂಡದಿಂದ ಸ್ವಾಗತ ನೃತ್ಯ, ಗಾಯಕ ಜೆಫ್ರಿ ಅಯ್ಯಪ್ಪ ಅವರಿಂದ ಕಾರ್ಯಕ್ರಮ, ಇಂಡಿಯಾಸ್ ಗಾಟ್ ಟ್ಯಾಲೆಂಟ್ ತಂಡದಿಂದ ವಿಶೇಷ ಕಾರ್ಯಕ್ರಮ, ಬೀಟ್ ಬಾಕ್ಸಿಂಗ್, ಜಿಲ್ಲಾಮಟ್ಟದ ನೃತ್ಯ ಸ್ಪರ್ಧೆ, ಗಿಟಾರ್ ಜುಗಲ್ ಬಂದಿ, ಸೆಲಬ್ರಿಟಿ ನೃತ್ಯ, ಡಿ.ಜೆ. ಶೋ, ಯುವ ದಸರಾದ ಪ್ರಮುಖ ಆಕರ್ಷಣೆಯಾಗಿದೆ.