ಸಿದ್ದಾಪುರ, ಸೆ.27: ಇಲ್ಲಿನ ಬಸ್ ನಿಲ್ದಾಣ ಸೇರಿದಂತೆ ಮುಖ್ಯ ರಸ್ತೆಗಳಲ್ಲಿ ಕಳೆದ ಕೆಲವು ತಿಂಗಳಿನಿಂದ ಗ್ರಾ.ಪಂ ಕಸವನ್ನು ವಿಲೇವಾರಿ ಮಾಡದ ಹಿನ್ನೆಲೆಯಲ್ಲಿ ರಾಶಿಗಟ್ಟಲೆ ಕಸ ಕೊಳೆತು ದುರ್ನಾತ ಬೀರುತ್ತಿದ್ದು. ಸಾರ್ವಜನಿಕರು ಮೂಗು ಮುಚ್ಚಿಕೊಂಡು ನಡೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ತ್ಯಾಜ್ಯ ವಿಲೇವಾರಿಗೆ ಗ್ರಾ.ಪಂ ಮುಂದಾಗಬೇಕೆಂದು ಆಗ್ರಹಿಸಿ ಸಿದ್ದಾಪುರ ಎಸ್‍ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಗ್ರಾ.ಪಂ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯುತ್ತಿದ್ದಂತೆ ಕಚೇರಿ ಮುಂದೆ ಜಮಾಯಿಸಿದ ಕಾರ್ಯಕರ್ತರು ಗ್ರಾ.ಪಂ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ವಿರುದ್ಧ ಸಿದ್ದಾಪುರ, ಸೆ.27: ಇಲ್ಲಿನ ಬಸ್ ನಿಲ್ದಾಣ ಸೇರಿದಂತೆ ಮುಖ್ಯ ರಸ್ತೆಗಳಲ್ಲಿ ಕಳೆದ ಕೆಲವು ತಿಂಗಳಿನಿಂದ ಗ್ರಾ.ಪಂ ಕಸವನ್ನು ವಿಲೇವಾರಿ ಮಾಡದ ಹಿನ್ನೆಲೆಯಲ್ಲಿ ರಾಶಿಗಟ್ಟಲೆ ಕಸ ಕೊಳೆತು ದುರ್ನಾತ ಬೀರುತ್ತಿದ್ದು. ಸಾರ್ವಜನಿಕರು ಮೂಗು ಮುಚ್ಚಿಕೊಂಡು ನಡೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೂಡಲೇ ತ್ಯಾಜ್ಯ ವಿಲೇವಾರಿಗೆ ಗ್ರಾ.ಪಂ ಮುಂದಾಗಬೇಕೆಂದು ಆಗ್ರಹಿಸಿ ಸಿದ್ದಾಪುರ ಎಸ್‍ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಗ್ರಾ.ಪಂ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯುತ್ತಿದ್ದಂತೆ ಕಚೇರಿ ಮುಂದೆ ಜಮಾಯಿಸಿದ ಕಾರ್ಯಕರ್ತರು ಗ್ರಾ.ಪಂ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ವಿರುದ್ಧ ಕೆಲವು ತಾಂತ್ರಿಕ ದೋಷಗಳಿಂದ ವಿಳಂಬವಾಗುತ್ತಿದೆ. ಕೂಡಲೇ ಕ್ರಮ ಕೈಗೊಳ್ಳುವದಾಗಿ ತಿಳಿಸಿದರು. ಇದಕ್ಕೆ ಒಪ್ಪದ ಪ್ರತಿಭಟನಾಕಾರರು ಕಳೆದ ಹಲವು ತಿಂಗಳಿನಿಂದ ಕೇವಲ ಭರವಸೆಗಳನ್ನು ನೀಡುತ್ತಾ ಗ್ರಾ.ಪಂ. ಆಡಳಿತ ಮಂಡಳಿ ಕಾಲಹರಣ ಮಾಡುತ್ತಿದ್ದು, ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿಲ್ಲ ಎಂದು ಆರೋಪಿಸಿದರು.

ಬಳಿಕ ಗ್ರಾ.ಪಂ ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಿ ಶೀಘ್ರದಲ್ಲೇ ಪಟ್ಟಣದಲ್ಲಿರುವ ತ್ಯಾಜ್ಯವನ್ನು ವಿಲೇವಾರಿ ಮಾಡುವದಾಗಿ ಹಾಗೂ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸುವದಾಗಿ ಗ್ರಾ.ಪಂ ಅಧ್ಯಕ್ಷ ಹಾಗೂ ಪಿಡಿಓ ಲಿಖಿತ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಪ್ರತಿಭಟನೆಯಲ್ಲಿ ಗ್ರಾ.ಪಂ ಸದಸ್ಯ ಶೌಕತ್ ಅಲಿ ಮತ್ತು ಲಕ್ಷ್ಮಿ, ಎಸ್‍ಡಿಪಿಐ ಪ್ರಮುಖರಾದ ಹನೀಫ್, ಬಶೀರ್, ಹಸ್ಸನ್ ಮತ್ತಿತರರು ಇದ್ದರು.