ವೀರಾಜಪೇಟೆ, ಸೆ. 29: ವೀರಾಜಪೇಟೆಯಲ್ಲಿ ಆಯುಧ ಪೂಜೆಯ ಪ್ರಯುಕ್ತ ವಿವಿಧ ದೇವಾಲಯಗಳಲ್ಲಿ ಬೆಳಗಿನಿಂದಲೇ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು. ಜೈನರಬೀದಿಯಲ್ಲಿ ರುವ ಬಸವೇಶ್ವರ ದೇವಾಲಯದಲ್ಲಿ ಬಸವೇಶ್ವರನಿಗೆ ಪೂಜೆಯೊಂದಿಗೆ ವಿವಿಧ ವಾಹನಗಳಿಗೆ ಸಾಮೂಹಿಕ ಆಯುಧ ಪೂಜೆ, ಇಲ್ಲಿನ ಗಡಿಯಾರ ಕಂಬದ ಬಳಿಯಿರುವ ಗಣಪತಿ ದೇವಾಲಯದಲ್ಲಿ, ಛತ್ರಕೆರೆ ಬಳಿಯ ಆಂಜನೇಯ ದೇವಾಲಯ ಸೇರಿದಂತೆ ವಿವಿಧೆಡೆಗಳಲ್ಲಿ ಪೂಜೆ ನಡೆಯಿತು.

ಕೊಡಗು ಖಾಸಗಿ ಬಸ್ ಕಾರ್ಮಿಕರಿಂದ ಇಲ್ಲಿನ ಖಾಸಗಿ ಬಸ್ಸು ನಿಲ್ದಾಣದಲ್ಲಿ ಖಾಸಗಿ ಬಸ್ಸುಗಳಿಗೆ ಸಾಮೂಹಿಕ ಆಯುಧ ಪೂಜೆ ನಂತರ ಅಪರಾಹ್ನ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು. ಇಲ್ಲಿನ ಆಟೋ ರಿಕ್ಷಾ ಚಾಲಕರಿಂದಲೂ ಸಾಮೂಹಿಕ ಆಯುಧ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.

ಸಿದ್ದಾಪುರ: ಸಿದ್ದಾಪುರದಲ್ಲಿ ಆಯುಧ ಪೂಜಾ ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು. ಸಿದ್ದಾಪುರದ ವಾಹನ ಚಾಲಕರ ಮಜ್ದೂರ್ ಸಂಘದ ವತಿಯಿಂದ 24ನೇ ವರ್ಷದ ಆಯುಧ ಪೂಜೆ ಕಾರ್ಯಕ್ರಮ ಪ್ರಯುಕ್ತ ಸಿದ್ದಾಪುರ ಬಸ್ಸು ನಿಲ್ದಾಣದಲ್ಲಿ ನಡೆದ ಧ್ವಜಾರೋಹಣವನ್ನು ವೆಂಕಪ್ಪ ರೈ ನೆರವೇರಿಸಿದರು. ಕಾರ್ಯಕ್ರಮವನ್ನು ಪ್ರದೀಪ್ ಶೆಟ್ಟಿ ಉದ್ಘಾಟಿಸಿದರು. ನಂತರ ನಡೆದ ಜಿಲ್ಲಾ ಮಟ್ಟದ ಸೈಕಲ್ ಸ್ಪರ್ಧೆಯನ್ನು ಸಿದ್ದಾಪುರ ಠಾಣಾಧಿಕಾರಿ ಜಿ.ಕೆ. ಸುಬ್ರಮಣ್ಯ ಉದ್ಘಾಟಿಸಿದರು. ಜಿಲ್ಲಾ ಮಟ್ಟದ ರಸ್ತೆ ಓಟವನ್ನು ಪಟ್ಟಡ ಶ್ಯಾಂ ಅಯ್ಯಪ್ಪ ಉದ್ಘಾಟಿಸಿದರು.

ನಂತರ ಶಾಲಾ ಮಕ್ಕಳಿಂದ ಸಾರ್ವಜನಿಕರಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಹನ ಚಾಲಕರ ಮಜ್ದೂರ್ ಸಂಘದ ಅಧ್ಯಕ್ಷ ಸೂದನ ಸತೀಶ್ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಅನಿಷ್, ಉಪಾಧ್ಯಕ್ಷ ರತೀಶ್ ಹಾಗೂ ಪದಾಧಿಕಾರಿಗಳು ಹಾಜರಿದ್ದರು.