ಮಡಿಕೇರಿ, ಅ. 1: ಪ್ರತಿಯೊಂದು ಹಬ್ಬಕ್ಕೂ ವಿಶೇಷ ಅರ್ಥವಿದ್ದು, ಭಾರತೀಯ ಸಂಸ್ಕøತಿ ಮತ್ತು ಪರಂಪರೆಯನ್ನು ಪರಸ್ಪರ ಅರ್ಥಮಾಡಿಕೊಂಡು ಎಲ್ಲ ಜಾತಿ, ಧರ್ಮದವರು ಸಹೋದರತೆ, ಸಹಭಾಗಿತ್ವ ಮತ್ತು ಸಹಬಾಳ್ವೆಯಿಂದ ಹಬ್ಬಗಳಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಅವರು ಕರೆ ನೀಡಿದರು. ನಗರ ಗಾಂಧಿ ಮೈದಾನದಲ್ಲಿ ನಡೆದ ಮಡಿಕೇರಿ ದಸರಾ ವಿಜಯದಶಮಿ ಸಭಾ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಪಾಲ್ಗೊಂಡು ಸಚಿವರು ಮಾತನಾಡಿದರು. ರಾಷ್ಟ್ರದಲ್ಲಿ ಪ್ರತಿ ತಿಂಗಳೂ ಒಂದಲ್ಲ ಒಂದು ಹಬ್ಬವನ್ನು ಆಚರಣೆ ಮಾಡುತ್ತೇವೆ. ಹಬ್ಬಗಳ ಆಚರಣೆಯಿಂದ ರಾಷ್ಟ್ರದ ಹಾಗೂ ನಾಡಿನ ಸಂಸ್ಕøತಿಯನ್ನು ಪ್ರತಿಬಿಂಭಿಸುವದರ ಜೊತೆಗೆ ಎಲ್ಲ ಜಾತಿ, ಧರ್ಮದವರು ಒಟ್ಟುಗೂಡಲು ಸಹಕಾರಿಯಾಗಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.

ದೇಶವು ವಿವಿಧತೆ ಯಲ್ಲಿ ಏಕತೆ ಹೊಂದಿದೆ. ಆ ನಿಟ್ಟಿನಲ್ಲಿ ಎಲ್ಲರೂ ನಂಬಿಕೆ, ವಿಶ್ವಾಸ ಮತ್ತು ಭ್ರಾತೃತ್ವದಿಂದ ಮತ್ತೊಬ್ಬರನ್ನು ಗೌರವಿಸಿ, ಉತ್ತಮ ಬದುಕು ನಡೆಸುವಂತಾಗಬೇಕು ಎಂದು ಯು.ಟಿ. ಖಾದರ್ ಹೇಳಿದರು.

ಮಡಿಕೇರಿ ದಸರಾಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವದು ಎಂದು ಇದೇ ಸಂದರ್ಭದಲ್ಲಿ ಸಚಿವರು ತಿಳಿಸಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಮಡಿಕೇರಿ ದಸರಾವು ವಿಶೇಷ ಮತ್ತು ವಿಶಿಷ್ಟ ಸಂಸ್ಕøತಿ ಹೊಂದಿದೆ ಎಂದರು.

ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ ಮಾತನಾಡಿ ನಾಡಿನ ಜೀವನದಿ ಕಾವೇರಿ ಹುಟ್ಟುವ ಪುಣ್ಯಭೂಮಿಯಲ್ಲಿ

(ಮೊದಲ ಪುಟದಿಂದ) ಜರುಗುತ್ತಿರುವ ದಸರಾವು ವಿಶಿಷ್ಟ ಹಾಗೂ ವಿಭಿನ್ನವಾಗಿದೆ ಎಂದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್, ಮಾತನಾಡಿ ಕೊಡಗು ವೀರಸೇನಾನಿಗಳು ಮತ್ತು ಕ್ರೀಡಾಪಟುಗಳ ನಾಡು ಹಾಗೂ ಪ್ರಕೃತಿ ಸೌಂದರ್ಯದ ಬೀಡು. ಈ ನಾಡಿನಲ್ಲಿ ಸದಾ ಶಾಂತಿ ನೆಲೆಸಬೇಕು, ಜೊತೆಗೆ ಸೌಹಾರ್ಧತೆ ಹೆಚ್ಚಬೇಕು ಎಂದರು. ಸುಪ್ರಿಂಕೋರ್ಟ್ ವಕೀಲ ಪಾಲಚಂಡ ಬ್ರಿಜೇಶ್ ಕಾಳಪ್ಪ ಮಾತನಾಡಿ, ನಾಡಹಬ್ಬ ದಸರಾವು ನಾಡಿನ ಕಲೆ, ಜಾನಪದ ಸಂಸ್ಕøತಿಯನ್ನು ಪ್ರತಿಬಿಂಭಿಸುತ್ತದೆ ಎಂದು ಅವರು ನುಡಿದರು. ಹೈಕೋರ್ಟ್ ವಕೀಲ ಚಂದ್ರಮೌಳಿ ಅವರು ಮಾತನಾಡಿ ನಾಡಹಬ್ಬ ದಸರಾವು ಸರ್ವ ಜನಾಂಗದ ಶಾಂತಿಯ ತೋಟವಾಗಿದೆ ಎಂದು ಬಣ್ಣಿಸಿದರು.

ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ದಸರಾ ಸಮಿತಿ ಕಾರ್ಯಧ್ಯಕ್ಷ ಮಹೇಶ್ ಜೈನಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್, ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಪೌರಾಯುಕ್ತೆ ಬಿ. ಶುಭಾ, ದಸರಾ ಸಮಿತಿ ಖಜಾಂಚಿ ಸಂಗೀತಾ ಪ್ರಸನ್ನ ವೇದಿಕೆಯಲ್ಲಿದ್ದರು. ನಗರಸಭ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಸ್ವಾಗತಿಸಿದರು. ‘ಶಕ್ತಿ’ ಸಂಪಾದಕ ಜಿ. ಚಿದ್ವಿಲಾಸ್ ಅವರು ಕಾರ್ಯಕ್ರಮ ನಿರೂಪಿಸಿದರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಚುಮ್ಮಿದೇವಯ್ಯ ವಂದಿಸಿದರು.