ಮಡಿಕೇರಿ, ಸೆ. 29: ಹಿಂದೂ ಜಾಗರಣಾ ವೇದಿಕೆಯ ನಾಯಕ ಜಗದೀಶ್ ಕಾರಂತ್ ಅವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಸಂಪ್ಯ ಪೊಲೀಸ್ ಅಧಿಕಾರಿ ಅಬ್ದುಲ್ ಖಾದರ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪದಡಿ ಜಗದೀಶ್ ಕಾರಂತರನ್ನು ಬಂಧಿಸಲಾಗಿದೆ.ತಾ. 15 ರಂದು ಪುತ್ತೂರಿನಲ್ಲಿ ನಡೆದ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆಯಲ್ಲಿ ಪೊಲೀಸ್ ಅಧಿಕಾರಿ ಅಬ್ದುಲ್ ಖಾದರ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಅವಹೇಳನಕಾರಿ ಹೇಳಿಕೆ ನೀಡಿದ್ದರೆಂದು ಪುತ್ತೂರ ನಗರ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದರು. ಬಿಹಾರದಿಂದ ಕಾರ್ಯಕ್ರಮವೊಂದನ್ನು ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಬೆಂಗಳೂರು ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಗದೀಶ್ ಕಾರಂತ್ ಅವರನ್ನು ಪೊಲೀಸರು ಬಂಧಿಸಿದರು.
ಪ್ರತಿಭಟನೆ : ಜಗದೀಶ್ ಕಾರಂತ್ ಬಂಧನವನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಇಂದು ಜಿ.ಟಿ. ವೃತ್ತದಲ್ಲಿ ಪ್ರತಿಭಟನೆ ನಡೆಸಿದವು.